HomeLatest NewsBREAKING : ಮಾಜಿ ಪ್ರಧಾನಿ H.D ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ, 'ICU' ನಿಂದ ವಾರ್ಡ್' ಗೆ...

BREAKING : ಮಾಜಿ ಪ್ರಧಾನಿ H.D ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ, ‘ICU’ ನಿಂದ ವಾರ್ಡ್’ ಗೆ ಶಿಫ್ಟ್.!

ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಈ ಹಿನ್ನೆಲೆ ವೈದ್ಯರು ಐಸಿಯುನಿಂದ ವಾರ್ಡ್’ ಗೆ ಶಿಫ್ಟ್ ಮಾಡಿದ್ದಾರೆ.
.
ಹೆಚ್.ಡಿ. ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಜೆಡಿಎಸ್ ವರಿಷ್ಠರಾದ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಅನಾರೋಗ್ಯದ ಕಾರಣ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಳಿ, ಜ್ವರ, ಸೋಂಕಿನ ಕಾರಣ ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಇರಿಸಿ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು. ಚಿಕಿತ್ಸೆ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಚಿಕಿತ್ಸೆ ಮುಂದುವರಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular