HomeIndiaಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಸ್.ಎಸ್. ಧರಮ್ ಸೋತ್ ಅರೆಸ್ಟ್

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಸ್.ಎಸ್. ಧರಮ್ ಸೋತ್ ಅರೆಸ್ಟ್

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ನಾಯಕ ಮತ್ತು ಮಾಜಿ ಪಂಜಾಬ್ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಿದೆ.

ರಾಜ್ಯದಲ್ಲಿ ನಡೆದಿರುವ ಅರಣ್ಯ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಭಾಗವಾಗಿ ಈ ಕ್ರಮ ಕೈಗೊಂಡಿದೆ. ಈ ಪ್ರಕರಣದ ಪರಿಶೀಲನೆಯನ್ನು ಇಡಿ ತೀವ್ರಗೊಳಿಸಿದ್ದು, 64ಧರಮ್ ಸೋತ್ ಅವರನ್ನು ಜಲಂಧರ್‌ನಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಧರಮ್ ಸೋತ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು.

ಮರ ಕಡಿಯಲು ಪರವಾನಗಿಗಳ ವಿತರಣೆ ಮತ್ತು ಇಲಾಖೆಯೊಳಗೆ ವರ್ಗಾವಣೆ ಅಥವಾ ಪೋಸ್ಟಿಂಗ್‌ಗೆ ಸಂಬಂಧಿಸಿದ ವಿಷಯಗಳಲ್ಲಿ ಹಣಕಾಸು ಅಕ್ರಮಗಳು ಮತ್ತು ಭ್ರಷ್ಟಾಚಾರ ತನಿಖೆಯ ಒಂದು ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಧು ಸಿಂಗ್ ಧರಂಸೋತ್ ಅವರು ಐದು ಬಾರಿ ವಿಧಾನಸಭೆಯ ಸದಸ್ಯರಾಗಿದ್ದಾರೆ. ಕಳೆದ ವರ್ಷ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಿದ್ದರು. ಮನಿ ಲಾಂಡರಿಂಗ್ ಪ್ರಕರಣವು ಪಂಜಾಬ್ ವಿಜಿಲೆನ್ಸ್ ಬ್ಯೂರೋ ದಾಖಲಿಸಿದ ಎಫ್‌ಐಆರ್‌ ಆಧರಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular