HomeLatest Newsಮಾಜಿ ರಾಜ್ಯಸಭಾ ಸದಸ್ಯ ಹೆಚ್.ಹನುಮಂತಪ್ಪ ವಿಧಿವಶ: ಬೆಳಿಗ್ಗೆ 10 ಗಂಟೆಯಿಂದ ಚಿತ್ರದುರ್ಗದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಮಾಜಿ ರಾಜ್ಯಸಭಾ ಸದಸ್ಯ ಹೆಚ್.ಹನುಮಂತಪ್ಪ ವಿಧಿವಶ: ಬೆಳಿಗ್ಗೆ 10 ಗಂಟೆಯಿಂದ ಚಿತ್ರದುರ್ಗದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಚಿತ್ರದುರ್ಗ: ಕಾಂಗ್ರೆಸ್‌ನ ಹಿರಿಯ ರಾಷ್ಟ್ರೀಯ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಗಾಂಧಿ ಪರಿವಾರಕ್ಕೆ ಅತ್ಯಂತ ಆಪ್ತರಾಗಿದ್ದ ಹನುಮಂತಪ್ಪ ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಮತ್ತು ಎರಡು ಬಾರಿ ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿ ದೇಶ ಹಾಗೂ ರಾಜ್ಯಕ್ಕೆ ಗಣನೀಯ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ರಾಜಕೀಯ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.

ಇಂದು ಮಧ್ಯಾಹ್ನ 4 ಗಂಟೆಗೆ ಚಿತ್ರದುರ್ಗದ ಮುಕ್ತಿಧಾಮದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಲಿದೆ. ಗಣ್ಯರ ಅಂತಿಮ ದರ್ಶನಕ್ಕಾಗಿ ನಗರದ ವಿವಿಧೆಡೆ ಸಾರ್ವಜನಿಕ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯವರೆಗೆ ನೆಹರು ನಗರದ ಅವರ ನಿವಾಸದ ಬಳಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 10 ರಿಂದ 11 ಗಂಟೆಯವರೆಗೆ ಸರಸ್ವತಿ ಕಾನೂನು ಕಾಲೇಜು ಆವರಣ, 11:30ರವರೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿ, ನಂತರ ಜಯದೇವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ನಾಯಕರಾಗಿದ್ದ ಹನುಮಂತಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮಧ್ಯಾಹ್ನ 2:15ಕ್ಕೆ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಸಿಎಂ ಮತ್ತು ಡಿಸಿಎಂ ಭೇಟಿಯ ಹಿನ್ನೆಲೆಯಲ್ಲಿ ಜಯದೇವ ಕ್ರೀಡಾಂಗಣ ಹಾಗೂ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular