BIG NEWS: ಮಾಜಿ ಕೇಂದ್ರ ಸಚಿವ ಹರ್ಮೋಹನ್ ಧವನ್ ವಿಧಿವಶ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹರ್ಮೋಹನ್ ಧವನ್ ತೀವ್ರ ಅನಾರೋಗ್ಯದಿಂದ ಮೊಹಾಲಿಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹರ್ಮೋಹನ್ ಧವನ್ ಅವರನ್ನು ಮೊಹಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಹರ್ಮೋಹನ್ ಧವನ್ 1989 ರಲ್ಲಿ ಚಂಡೀಗಢದಿಂದ ಸಂಸತ್ ಸದಸ್ಯರಾಗಿ, ಚಂದ್ರಶೇಖರ್ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೇ ವಿವಿಧ ರಾಜಕೀಯ ಪಕ್ಷಗಳಿಗೆ ಕೊಡುಗೆ ನೀಡಿದರು. ಕಾಂಗ್ರೆಸ್, ಬಿ ಎಸ್ ಪಿ, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಅವರು ಆಮ್ ಆದ್ಮಿ ಪಕ್ಷವನ್ನು ಸೇರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read