HomeIndiaBIG NEWS: ಗುಂಡು ಹಾರಿಸಿಕೊಂಡು ಮಾಜಿ ಕೇಂದ್ರ ಸಚಿವರ ಸಂಬಂಧಿ ಆತ್ಮಹತ್ಯೆ

BIG NEWS: ಗುಂಡು ಹಾರಿಸಿಕೊಂಡು ಮಾಜಿ ಕೇಂದ್ರ ಸಚಿವರ ಸಂಬಂಧಿ ಆತ್ಮಹತ್ಯೆ

ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಚಾಕುರ್ಕರ್ ಅವರ 81 ವರ್ಷದ ಸಂಬಂಧಿ ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹನುಮಂತರಾವ್ ಪಾಟೀಲ್ ಎಂದೂ ಕರೆಯಲ್ಪಡುವ ಚಂದ್ರಶೇಖರ್ ಅವರು ಬೆಳಿಗ್ಗೆ 8:30 ರ ಸುಮಾರಿಗೆ ಪರವಾನಗಿ ಪಡೆದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಮೃತರು ಮಾಜಿ ಕೇಂದ್ರ ಗೃಹ ಸಚಿವ -ಲೋಕಸಭೆ ಸ್ಪೀಕರ್ ಶಿವರಾಜ್ ಪಾಟೀಲ್ ಅವರ ಸೋದರ ಸಂಬಂಧಿಯಾಗಿದ್ದಾರೆ. ಹನುಮಂತರಾವ್ ಅವರು ಮಾಜಿ ಸಚಿವರ ‘ದೇವಘರ್’ ನಿವಾಸದ ಸಮೀಪದಲ್ಲಿ ವಾಸಿಸುತ್ತಿದ್ದರು ಮತ್ತು ಆಗಾಗ್ಗೆ ಭೇಟಿ ನೀಡುತ್ತಿದ್ದರು. ಅವರು ಹಲವಾರು ವರ್ಷಗಳಿಂದ ಕಾಯಿಲೆಗಳಿಂದ ಬಳಲುತ್ತಿದ್ದರು ಎಂಬುದು ಗೊತ್ತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular