HomeKarnatakaಗೋವಿನ ಕತ್ತು ಸೀಳಿದ ನಾಲ್ವರು ಆರೋಪಿಗಳು ಅರೆಸ್ಟ್

ಗೋವಿನ ಕತ್ತು ಸೀಳಿದ ನಾಲ್ವರು ಆರೋಪಿಗಳು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪದಲ್ಲಿ ಗೋವಿನ ಕತ್ತು ಸೀಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಮಹಮದ್ ಸಲೀಂ ಬಾಳೂರ್(34)  ಮಕಬುಲ್ ಅಹ್ಮದ್ ಬಡಿಗೇರ(22)  ಸುಲೇಮಾನ್ ಕೋಲಾರಿ(26) ಹಾಗೂ ಮಲ್ಲಿಕ್ ರಿಹಾನ್(25) ಬಂಧಿತ ಆರೋಪಿಗಳು.

ಹೊಸನಗರ ತಾಲ್ಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ದುಷ್ಕರ್ಮಿಗಳು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸು, ಕರು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಎಂ.ಐ. ಗೌಡಪ್ಪಗೌಡ್ರ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಹೊಸನಗರ ಠಾಣೆಯ ಪಿಎಸ್‌ಐ ಶಂಕರಗೌಡ ಪಾಟೀಲ್, ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ, ನಗರ ಠಾಣೆಯ ಪಿಎಸ್‌ಐ ಶಿವಾನಂದ ವೈ.ಕೆ., ಪೊಲೀಸ್ ಸಿಬ್ಬಂದಿ ಹಾಗೂ ಶಿವಮೊಗ್ಗ ಎಎನ್‌ಸಿ ವಿಭಾಗದ ಅಧಿಕಾರಿಗಳ ಸಹಕಾರದೊಂದಿಗೆ ಜುಲೈ 4ರಂದು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಹೊಸನಗರ ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಹೊಸನಗರ ಠಾಣೆಯ ಸಿಬ್ಬಂದಿಗಳಾದ ಕಿರಣ್ ಕುಮಾರ್ ಡಿ.ವೈ., ಶಿವಕುಮಾರನಾಯ್ಕ, ಮಾಯಪ್ಪ ಗೋಕಾವಿ, ರವಿಚಂದ್ರ, ಸುನಿಲ್, ಗೋಪಾಲಕೃಷ್ಣ , ಮಧುಸೂಧನ್ , ಜಗದೀಶ್ ಹಾಗೂ ಶಿವಮೊಗ್ಗ ಎಎನ್‌ಸಿ ವಿಭಾಗದ ಗುರುರಾಜ ಮತ್ತು ಇಂದೇಶ ಅವರು ಭಾಗವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular