ಮಂಗಳೂರು: ಅಜ್ಜಿಯ ತಿಥಿ ಕಾರ್ಯಕ್ಕೆ ಮಾಂಸಹಾರ ಮಾಡಲು ನದಿಯಲ್ಲಿ ಆಮೆಗಳನ್ನು ಬೇಟೆಯಾಡಿ ಸುಡುತ್ತಿದ್ದ ನಾಲ್ವರನ್ನು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಣಿಕಂಠ(42), ರಾಜೇಂದ್ರ(54), ವಿಘ್ನೇಶ್(32), ಪ್ರಶಾಂತ್(35) ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಗರದ ಸೋಮಾವತಿ ನದಿಯಲ್ಲಿ ನಾಲ್ಕು ಆಮೆಗಳನ್ನು ಬೇಟೆಯಾಡಿ ನದಿ ದಟದಲ್ಲಿ ಮಾಂಸ ಸುಡಲು ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ.
ಈ ವೇಳೆ ಪೊಲೀಸರು ದಾಳಿ ಮಾಡಿ ನಾಲ್ವರನ್ನು ವಶಕ್ಕೆ ಪಡೆದು ಆಮೆಗಳನ್ನು ಜಪ್ತಿ ಮಾಡಿದ್ದಾರೆ. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ನಾಲ್ವರನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್ ನೀಡಿ ಬಿಡುಗಡೆ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ ಸಂಬಂಧಿ ಅಜ್ಜಿಯ ತಿಥಿ ಕಾರ್ಯಕ್ಕೆ ಫೆಬ್ರವರಿ 13 ರಂದು ಬಂದಿದ್ದ ಇವರು 14 ರಂದು ಸೋಮಾವತಿ ನದಿಯಲ್ಲಿ ಆಮೆ ಬೇಟೆಯಾಡಿದ್ದರು.

