HomeLatest Newsದೇವರ ಉತ್ಸವದಲ್ಲಿ ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ನಾಲ್ವರಿಗೆ ಗಾಯ, ಓರ್ವ ಗಂಭೀರ

ದೇವರ ಉತ್ಸವದಲ್ಲಿ ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ನಾಲ್ವರಿಗೆ ಗಾಯ, ಓರ್ವ ಗಂಭೀರ

ದಾವಣಗೆರೆ: ದೇವರ ಉತ್ಸವದಲ್ಲಿ ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ನಾಲ್ವರಿಗೆ ಸುಟ್ಟ ಗಾಯಗಳಾಗಿವೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನೆಲಹೊನ್ನೆ ಗ್ರಾಮದಲ್ಲಿ ಘಟನೆ ನಡೆದಿದೆ.

ವಿಜಯದಶಮಿ ಹಬ್ಬದ ಮಾರನೇ ದಿನ ದೇವಿಯನ್ನು ಹೊತ್ತುಕೊಂಡು ಕೆಂಡ ಹಾಯುವಾಗ ಕರೇಗೌಡ(50) ಆಕಸ್ಮಿಕವಾಗಿ ಕೆಂಡದ ಮೇಲೆ ಬಿದ್ದಿದ್ದಾರೆ. ಇದೇ ವೇಳೆ ಆಯತಪ್ಪಿದ ಮೂವರು ಕೂಡ ಕೆಂಡದ ಮೇಲೆ ಬಿದ್ದಿದ್ದು, ಸುಟ್ಟು ಗಾಯಗಳಾಗಿವೆ. ಗಾಯಗೊಂಡ ಎಲ್ಲರನ್ನೂ ದಾವಣಗೆರೆ ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೇಗೌಡ ಗಂಭೀರವಾಗಿ ಗಾಯಗೊಂಡಿದ್ದು, ದೇಹದ ಭಾಗದ ಶೇ. 40 ರಷ್ಟು ಸುಟ್ಟಗಾಯಗಳಾಗಿವೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular