HomeIndiaಜಾರ್ಖಂಡ್‌ ನಲ್ಲಿ ಭದ್ರತಾ ಪಡೆಗಳಿಂದ ಎನ್ ಕೌಂಟರ್: ನಾಲ್ವರು ನಕ್ಸಲರ ಹತ್ಯೆ

ಜಾರ್ಖಂಡ್‌ ನಲ್ಲಿ ಭದ್ರತಾ ಪಡೆಗಳಿಂದ ಎನ್ ಕೌಂಟರ್: ನಾಲ್ವರು ನಕ್ಸಲರ ಹತ್ಯೆ

ರಾಂಚಿ: ಜಾರ್ಖಂಡ್‌ ನ ಹಜಾರಿಬಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಕೆರೆದರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಟುಕಾ ಅರಣ್ಯ ಪ್ರದೇಶದಲ್ಲಿ ಈ ಎನ್‌ಕೌಂಟರ್ ವರದಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬರ್ಕಗಾಂವ್‌ ನ ಎಸ್‌ಡಿಪಿಒ ಪವನ್ ಕುಮಾರ್, ಗುಂಡೇಟಿನಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಅವರ ಗುರುತುಗಳನ್ನು ಪರಿಶೀಲಿಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಗಾಯಗೊಂಡಿಲ್ಲ. ಕಾರ್ಯಾಚರಣೆಯ ಹೆಚ್ಚಿನ ವಿವರಗಳನ್ನು ನಂತರ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್‌ನಲ್ಲಿ 1 ಕೋಟಿ ರೂ. ಬಹುಮಾನ ಹೊಂದಿರುವ ಮಿಸಿರ್ ಬೆಸ್ರಾ ನೇತೃತ್ವದ ಮಾವೋವಾದಿ ಪಡೆ ಜೊತೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular