ಅಲಿಗಢ: ಉತ್ತರ ಪ್ರದೇಶದ ಅಲಿಗಢ ಬಳಿಯ ರಾಷ್ಟ್ರೀಯ ಹೆದ್ದಾರಿ 91 ರಲ್ಲಿ ಮಂಗಳವಾರ (ಸೆಪ್ಟೆಂಬರ್ 23) ಬೆಳಿಗ್ಗೆ ಕಾರು ಮಿನಿ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ.
ವರದಿಗಳ ಪ್ರಕಾರ, ಗಂಭೀರ ಗಾಯಗಳೊಂದಿಗೆ ಒಬ್ಬ ವ್ಯಕ್ತಿ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲಿಗಢ ನಗರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ನಾನೌ ಸೇತುವೆ ಬಳಿ ಬೆಳಿಗ್ಗೆ 6:00 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಎರಡೂ ವಾಹನಗಳು ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ಮುಖಾಮುಖಿ ಡಿಕ್ಕಿ ಹೊಡೆದು ಒಟ್ಟಿಗೆ ಸಿಲುಕಿಕೊಂಡವು. ಪರಿಣಾಮ ಇಂಧನ ಟ್ಯಾಂಕ್ ಛಿದ್ರಗೊಂಡು, ಬೆಂಕಿ ಕಾಣಿಸಿಕೊಂಡು ಎರಡೂ ವಾಹನಗಳು ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾದವು. ಅಪಘಾತದ ನಂತರದ ಕೆಲವು ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡವು.
ದೇವಾಲಯಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬಲಿಪಶುಗಳಲ್ಲಿ 5 ಮತ್ತು 8 ವರ್ಷ ವಯಸ್ಸಿನ ಇಬ್ಬರು ಮಕ್ಕಳು, ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸೇರಿದ್ದಾರೆ. ಅವರ ದೇಹಗಳು ತೀವ್ರವಾಗಿ ಸುಟ್ಟುಹೋಗಿದ್ದು, ಗುರುತಿಸುವುದು ಕಷ್ಟಕರವಾಗಿತ್ತು. ಗಂಭೀರ ಸ್ಥಿತಿಯಲ್ಲಿ ಅಲಿಗಢ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
अलीगढ़
— Dharmendra Rajpoot (@dharmendra_lmp) September 23, 2025
नेशनल हाईवे पर कार व कैंटर की भिड़ंत से लगी आग,
घटना में मासूम बच्चे व महिला सहित चार लोग जिन्दा जले,एक घायल । pic.twitter.com/YLmyDwatKS