BREAKING : ಕೋಳಿ ಫಾರಂ ನಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರು ನಿಗೂಢ ಸಾವು

ಕೋಳಿ ಫಾರಂ  ಶೆಡ್ ನಲ್ಲಿ  ಮಲಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಬಳಿಯ ಹೊಲೆಯರಹಳ್ಳಿ ಬಳಿ ನಡೆದಿದೆ.

ಮೃತರನ್ನು ನೇಪಾಳ ಮೂಲದವರಾದ ಕಾಲೇ ಸರೇರಾ (60), ಲಕ್ಷ್ಮಿ ಸರೇರಾ (50), ಉಷಾ ಸರೇರಾ (40) ಹಾಗೂ ಪೂಲ್ ಸರೇರಾ (16) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಕೆಲಸ ಅರಸಿ ಬಂದಿದ್ದರು ಎಂದು ಹೇಳಲಾಗಿದೆ. ವಿಷ ಸೇವಿಸಿ ಎಲ್ಲರೂ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನ ಕಾಡುತ್ತಿದೆ.

ರಾತ್ರಿ ಶೆಡ್ ಬಾಗಿಲು ಹಾಕಿಕೊಂಡು ಮಲಗಿದ್ದವರು ಭಾನುವಾರ ಬೆಳಗ್ಗೆ ನೋಡಿದಾಗ ಎಲ್ಲರೂ ಶವವಾಗಿ ಪತ್ತೆಯಾಗಿದ್ದಾರೆ. ನಾಲ್ವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read