HomeKarnatakaSHOCKING : ಬೆಂಗಳೂರಲ್ಲಿ ‘ಕಿಲ್ಲರ್’ BMTC ಬಸ್‌'ಗೆ ನಿನ್ನೆ ಒಂದೇ ದಿನ ನಾಲ್ವರು ಬಲಿ.!

SHOCKING : ಬೆಂಗಳೂರಲ್ಲಿ ‘ಕಿಲ್ಲರ್’ BMTC ಬಸ್‌’ಗೆ ನಿನ್ನೆ ಒಂದೇ ದಿನ ನಾಲ್ವರು ಬಲಿ.!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನ ನಡೆದ ಎರಡು ಪ್ರತ್ಯೇಕ ಭೀಕರ ಅಪಘಾತಗಳಲ್ಲಿ ಬಿಎಂಟಿಸಿ ಬಸ್‌ಗಳು ನಾಲ್ವರ ಪ್ರಾಣ ಕಸಿದಿವೆ. ಒಂದು ಘಟನೆಯಲ್ಲಿ ರಸ್ತೆ ದಾಟುತ್ತಿದ್ದ ಗಾರೆ ಕೆಲಸಗಾರ ಮೃತಪಟ್ಟರೆ, ಮತ್ತೊಂದು ಘಟನೆಯಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ.

ರಸ್ತೆ ದಾಟುತ್ತಿದ್ದಾಗ ಬಸ್‌ ಡಿಕ್ಕಿ; ಗಾರೆ ಕೆಲಸಗಾರ ಸಾವು

ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಕ್ರಾಸ್‌ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಡಿಕ್ಕಿ ಹೊಡೆದ ಪರಿಣಾಮ ರಾಜು (57) ಎಂಬ ಗಾರೆ ಕೆಲಸಗಾರ ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿವಾಸಿಯಾಗಿದ್ದ ರಾಜು, ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಗುರುವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಬಸ್‌ ಚಾಲಕನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೂಲಿಬೆಲೆ ಬಳಿ ಒಂದೇ ಕುಟುಂಬಕ್ಕೆ ಕಂಟಕವಾದ ಬಸ್‌

ಇನ್ನೊಂದು ಘಟನೆ ಸೂಲಿಬೆಲೆ ಸಮೀಪದ ವೇರ್‌ಹೌಸ್‌ ಬಳಿ ನಡೆದಿದೆ. ತಿರುವಿನಲ್ಲಿ ಸಾಗುತ್ತಿದ್ದ ಬೈಕ್‌ಗೆ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಅರುಣ್‌ (33), ಅವರ ಪತ್ನಿ ಅನುಷಾ (28) ಹಾಗೂ ಪುತ್ರಿ ಅರಣಿ (3) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ದೇವನಹಳ್ಳಿ ತಾಲೂಕಿನ ತೆಲ್ಪಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ಅನ್ಸಿಕಾ (6) ಎಂಬ ಮತ್ತೊಂದು ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಎಂವಿಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ ದಾಖಲು

ಘಟನೆ ಕುರಿತು ಮಾಹಿತಿ ಪಡೆದ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತಕ್ಕೀಡಾದ ಬಸ್‌ನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾರ್ವಜನಿಕರಲ್ಲಿ ಆತಂಕ

ಒಂದೇ ದಿನ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಬಿಎಂಟಿಸಿ ಬಸ್‌ಗಳು ಭಾಗಿಯಾಗಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಸ್ತೆ ಸುರಕ್ಷತೆ, ಸಂಚಾರ ನಿಯಮ ಪಾಲನೆ ಹಾಗೂ ಬಸ್‌ ಚಾಲಕರ ಜಾಗರೂಕತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ.

ಒಟ್ಟಾರೆ, ಶುಕ್ರವಾರ ನಡೆದ ಈ ಎರಡು ದುರಂತಗಳಲ್ಲಿ ನಾಲ್ವರು ಮೃತಪಟ್ಟಿದ್ದು, ಬಾಲಕಿಯೊಬ್ಬಳು ಜೀವನ್ಮರಣ ಹೋರಾಟ ನಡೆಸುತ್ತಿರುವುದು ದುಃಖಕರ ಸಂಗತಿಯಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular