HomeLatest Newsಸರ್ಕಾರಿ ದಾಖಲೆ ತಿದ್ದಿ ನೂರಾರು ಎಕರೆ ಕಬಳಿಕೆ: ಕಂದಾಯ ಇಲಾಖೆ ನಾಲ್ವರು ನೌಕರರ ಅಮಾನತು

ಸರ್ಕಾರಿ ದಾಖಲೆ ತಿದ್ದಿ ನೂರಾರು ಎಕರೆ ಕಬಳಿಕೆ: ಕಂದಾಯ ಇಲಾಖೆ ನಾಲ್ವರು ನೌಕರರ ಅಮಾನತು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಕಚೇರಿಯಲ್ಲಿ ಸರ್ಕಾರಿ ದಾಖಲೆಗಳನ್ನು ತಿದ್ದಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರಾರು ಎಕರೆ ಸರ್ಕಾರಿ ಜಾಗ ಕಬಳಿಕೆ ಮಾಡಿದ ಆರೋಪದ ಮೇಲೆ ಕಂದಾಯ ಇಲಾಖೆಯ ನಾಲ್ವರು ನೌಕರರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ.

ದ್ವಿತೀಯ ದರ್ಜೆ ಸಹಾಯಕರಾದ ಹೆಚ್‌.ವಿ. ಸತೀಶ್, ಯೋಗೇಶ್, ಗುರುಮೂರ್ತಿ ಮತ್ತು ವಿಜಯಕುಮಾರ್ ಅವರನ್ನು ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ.

ಆರೋಪಿತರು ಕರ್ತವ್ಯದಲ್ಲಿ ಮುಂದುವರೆದರೆ ಸಾಕ್ಷ್ಯಗಳನ್ನು ನಾಶಪಡಿಸುವ, ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆ ಇರುವುದರಿಂದ ಅಮಾನತು ಜತೆಗೆ ಬೇರೆ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂತಪುರ ಗ್ರಾಮದ ಗ್ರಾಮ ಸಹಾಯಕ ಎಸ್. ಯೋಗೇಶ್ ಅವರನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದ ಮೇರೆಗೆ ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶಿಸಲಾಗಿದೆ. ಭೂ ಮಂಜೂರಾತಿ ವಿಭಾಗದ ಶಿರಸ್ತೆದಾರ್ ರವಿಶಂಕರ್ ಮತ್ತು ಅಭಿಲೇಖಾಲೆಯ ವಿಭಾಗದ ಉಮೇಶ್ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಮೈಸೂರು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular