ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದಲ್ಲಿ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ ಗೆ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದಾರೆ.
ಈ ನೀರು ಬಳಕೆ ಮಾಡಿದ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಹೂವಿನಕೊಣೆ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಮದ್ಯಪಾನ ಮಾಡಿದ ಕಿಡಿಗೇಡಿಗಳು ಎರಡು ನೀರಿನ ಟ್ಯಾಂಕ್ ಗಳಿಗೆ ಕಳೆನಾಶಕ ಮಿಶ್ರಣ ಮಾಡಿದ್ದಾರೆ. ಮಕ್ಕಳು ಮಧ್ಯಾಹ್ನ ಊಟದ ಬಳಿಕ ಕೈ ತೊಳೆದಾಗ ವಾಸನೆ ಬಂದಿದೆ. ಇದನ್ನು ಶಿಕ್ಷಕರು ಗಮನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೈ ತೊಳೆದ ನಾಲ್ವರು ಮಕ್ಕಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.