ಟಿವಿ ಸೆಟ್ ಟಾಪ್ ಬಾಕ್ಸ್ ನಿಂದ ವಿದ್ಯುತ್ ಶಾಕ್: ಬಾಲಕ ಸಾವು

ನಾಗ್ಪುರ: ಮನೆಯಲ್ಲಿ ಟೆಲಿವಿಷನ್ ಸೆಟ್-ಟಾಪ್ ಬಾಕ್ಸ್(ಎಸ್‌ಟಿಬಿ) ಸ್ಪರ್ಶಿಸಿದಾಗ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ.

ಹಿಂಗ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಖೈರೆ ಪನ್ನಾಸೆ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಅವನ ತಂದೆ ಮಲಗುವ ಕೋಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಬಾಲಕ ದೂರದರ್ಶನದಲ್ಲಿ ಕಾರ್ಟೂನ್ ವೀಕ್ಷಿಸುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಡುಗ ಸೆಟ್ ಟಾಪ್ ಬಾಕ್ಸ್ ಎಳೆದು ತನ್ನೊಂದಿಗೆ ಸಾಗಿಸಲು ಪ್ರಯತ್ನಿಸಿದನು. ಈ ವೇಳೆ ವಿದ್ಯುತ್ ಶಾಕ್ ತಗುಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಸ್ವಲ್ಪ ಸಮಯದ ನಂತರ, ಬಾಲಕನ ತಂದೆ ನೆಲದ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿ ಆಸ್ಪತ್ರೆಗೆ ಸಾಗಿಸಿದರು, ಅಲ್ಲಿ ವೈದ್ಯರು ಮಗು ಸತ್ತಿದೆ ಎಂದು ಘೋಷಿಸಿದ್ದಾರೆ. ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read