HomeKarnatakaಪೊಲೀಸರು, ಪತ್ರಕರ್ತರ ಸೋಗಿನಲ್ಲಿ ಸುಲಿಗೆ: ನಾಲ್ವರು ಯೂಟ್ಯೂಬರ್ ಗಳು ಅರೆಸ್ಟ್

ಪೊಲೀಸರು, ಪತ್ರಕರ್ತರ ಸೋಗಿನಲ್ಲಿ ಸುಲಿಗೆ: ನಾಲ್ವರು ಯೂಟ್ಯೂಬರ್ ಗಳು ಅರೆಸ್ಟ್

ಬೆಳಗಾವಿ: ಪೊಲೀಸರು ಪತ್ರಕರ್ತರ ಸೋಗಿನಲ್ಲಿ ಸಾರ್ವಜನಿಕರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದ ಈ ಗ್ಯಾಂಗ್ ವಿರುದ್ಧ ಬೆಳಗಾವಿ ಜಿಲ್ಲೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾವು ಪೊಲೀಸರು, ಪತ್ರಕರ್ತರು ಎಂದು ಹೇಳಿಕೊಂಡ ತಂಡ ವ್ಯಕ್ತಿಯೊಬ್ಬನನ್ನು ಗಾಂಜಾ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ 60 ಸಾವಿರ ರೂ. ಸುಲಿಗೆ ಮಾಡಿದೆ.

ಕೊಡಬಾಗಿ ಗ್ರಾಮದ ಮಹಿಬೂಬ್ ಬಾಬುಸಾಬ್ ಜಮಾದಾರ ಸುಲಿಗೆಗೆ ಒಳಗಗಾದವರು. ಹುಕ್ಕೇರಿಯ ಕಲ್ಲಪ್ಪ ಮಾಳಾಜ್ ಸೇರಿದಂತೆ ಐವರ ವಿರುದ್ಧ ಅವರು ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 18ರಂದು ಕಾಕತಿ ಮೂಲದ ವ್ಯಕ್ತಿಯೊಬ್ಬ ಕೊಟಬಾಗಿ ಸಮೀಪ ಮಹಿಬೂಬ್ ಗೆ ಬಲವಂತವಾಗಿ ಎರಡು ಪ್ಯಾಕೆಟ್ ಗಾಂಜಾ ನೀಡಿ ಒಂದು ರೂಪಾಯಿ ಪಡೆದುಕೊಂಡಿದ್ದ. ಸ್ವಲ್ಪ ಸಮಯದಲ್ಲೇ ಉಳಿದ ಆರೋಪಿಗಳು ಕಾರ್ ನಲ್ಲಿ ಬಂದು ಸಮೀಪದ ಕಬ್ಬಿಣ ಗದ್ದೆಗೆ ಕರೆದುಕೊಂಡು ಹೋಗಿ ಗಾಂಜಾ ಮಾರಾಟ ಮಾಡುತ್ತಿದ್ದೀಯಾ ಎಂದು ಬೆದರಿಸಿ ಫೋಟೋ, ವಿಡಿಯೋ ಚಿತ್ರೀಕರಿಸಿಕೊಂಡಿದ್ದಾರೆ. ಬಲವಂತವಾಗಿ ಕಾರ್ ನಲ್ಲಿ ಕೂರಿಸಿಕೊಂಡು ಹುಕ್ಕೇರಿ ಕಡೆಗೆ ಕರೆದುಕೊಂಡು ಹೋಗಿದ್ದು, ನಿನ್ನ ವಿರುದ್ಧ ಗಾಂಜಾ ಪ್ರಕರಣ ದಾಖಲಿಸಿ ಹಿಂಡಲಗಾ ಜೈಲಿಗೆ ಕಳುಹಿಸುತ್ತೇವೆ. 3 ಲಕ್ಷ ರೂಪಾಯಿ ಕೊಟ್ಟರೆ ಪ್ರಕರಣ ದಾಖಲಿಸದೆ ಬಿಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಬೆದರಿದ ಮಹಿಬೂಬ್ ಮೊದಲು 15 ಸಾವಿರ ರೂ. ಮತ್ತು ನಂತರ 45 ಸಾವಿರ ರೂ. ಸೇರಿ ಒಟ್ಟು 60 ಸಾವಿರ ರೂ. ನೀಡಿದ್ದರೂ ಆರೋಪಿಗಳು ಇನ್ನೂ ಹೆಚ್ಚಿನ ಹಣ ಕೊಡುವಂತೆ ಪೀಡಿಸಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ತಮ್ಮ ಯುಟ್ಯೂಬ್ ಚಾನೆಲ್ ಗಳಲ್ಲಿ ವಿಡಿಯೋ ಹಾಕಿದ್ದು, ವಿಡಿಯೋ ನೋಡಿದ ನಂತರ ಮೆಹಬೂಬ್ ಹುಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಯೂಟ್ಯೂಬ್ ಚಾನೆಲ್ ಹೆಸರಲ್ಲಿ ಮತ್ತು ಪೊಲೀಸರ ಸೋಗಿನಲ್ಲಿ ಸುಲಿಗೆ ಮಾಡುತ್ತಿದ್ದ ಜಾಲವನ್ನು ಬಯಲಿಗೆಳೆದು ನಾಲ್ವರನ್ನು ಬಂಧಿಸಿದ್ದಾರೆ.

ಕಲ್ಲಪ್ಪ ಮಾಳಾಜ್, ಮಲ್ಲಿಕಾರ್ಜುನ, ಪೃಥ್ವಿರಾಜ್ ಚೌಹಾಣ್, ಡೇವಿಡ್ ತಂಗೆರಾಳ ಎನ್ನುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಕಾರ್, ಮೊಬೈಲ್ ಫೋನ್ ಗಳು, ನಗದು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular