HomeLatest NewsBIG NEWS: ವಂಚನೆ ಪ್ರಕರಣ: ನಟಿ ಆಲಿಯಾ ಭಟ್ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್

BIG NEWS: ವಂಚನೆ ಪ್ರಕರಣ: ನಟಿ ಆಲಿಯಾ ಭಟ್ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್

ಮುಂಬೈ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟಿ ಆಲಿಯಾ ಭಟ್ ಅವರ ಮಾಜಿ ಆಪ್ತ ಕಾರ್ಯದರ್ಶಿಯನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಘಟನೆ ನಡೆದಿದೆ.

ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧಿತ ಆರೋಪಿ. ನಟನೊಬ್ಬನಿಗೆ 77 ಲಕ್ಷ ರೂಪಾಯಿ ವಂಚಿಸಿದ್ದ ಪ್ರಕರಣದಲ್ಲಿ ಆರೋಪಿ ವೇದಿಕಾ ಶೆಟ್ಟಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಟ್ ನಿರ್ಮಾಣ ಸಂಸ್ಥೆ ಎಟರ್ನಲ್ ಸನ್ ಶೈನ್ ಪ್ರೊಡೆಕ್ಷನ್ಸ್ ಪ್ರೈವೆಟ್ ಲಿಮಿಟೆಡ್ ಖಾತೆ ಹಾಗೂ ನಟಿಯ ಖಾತೆಯಿಂದ ಸುಮಾರು 76.9 ಲಕ್ಷ ರೂ ಹಣ ವಂಚಿಸಿದ ಆರೋಪ ವೇದಿಕಾ ವಿರುದ್ಧ ಕೇಳಿಬಂದಿದೆ. 2022 ರ ಮೇ ಮತ್ತು 2024ರ ಆಗಸ್ಟ್ ತಿಂಗಳ ನಡುವೆ ಈ ವಂಚನೆ ಎಸಗಿದ್ದಾರೆ.

ಆಲಿಯಾ ಭಟ್ ತಾಯಿ, ನಟಿ-ನಿರ್ದೇಶಕಿ ಸೋನಿ ರಜ್ದಾನ್ ಜುಹು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ರಾಜಸ್ಥಾನ, ಕರ್ನಾಟಕದ ವಿವಿಧೆಡೆಗಳಿಗೆ ತೆರಳಿ ತಲೆಮರೆಸಿಕೊಂಡಿದ್ದ ವೇದಿಕಾ ಶೆಟ್ಟಿಯನ್ನು ಇದೀಗ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular