BIG NEWS: ಪೊಲೀಸ್ ಅಧಿಕಾರಿ ಹೆಸರಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ವಂಚನೆ: 16 ಆರೋಪಿಗಳು ಅರೆಸ್ಟ್

ಬೆಂಗಳೂರು: ಪೊಲೀಸ್ ಅಧಿಕಾರಿ ಹೆಸರಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬೆದರಿಕೆಯೊಡ್ಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ 16 ಜನರನ್ನು ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಹೆಚ್ ಎಸ್ ಆರ್ ಲೇಔಟ್ ನ 27ನೇ ಮುಖ್ಯರಸ್ತೆಯಲ್ಲಿ ನಕಲಿ ಬಿಪಿಒ ಕಂಪನಿ ತೆರೆದಿದ್ದ ವಂಚಕರು ಮುಗ್ಧ ಜನರಿಗೆ ಕರೆ ಮಾಡಿ ಪೊಲೀಸ್ ಅಧಿಕಾರಿಗಳು ಎಂದು ಸುಳ್ಲು ಹೇಳಿ ಬೆದರಿಕೆ ಹಾಕುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಇನ್ಸ್ ಪೆಕ್ಟರ್ ಹರೀಶ್ ಕುಮಾರ್ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದರು.

ನಕಲಿ ಕಂಪನಿ ಮೇಲೆ ದಾಳಿ ನಡೆಸಿ 40 ಕಂಪ್ಯೂಟರ್ ಗಳನ್ನು ಜಪ್ತಿ ಮಾಡಿದ್ದಾರೆ. ಸಿಬಿಟ್ಸ್ ಸೊಲ್ಯೂಷನ್ ಪ್ರೈವೆಟ್ ಲಿಮಿಟೆಡ್ ಹೆಸರಲ್ಲಿ ವಂಚಕರು ಕಳೆದ ಎರಡು ವರ್ಷ ಹಿಂದೆ ಬಿಪಿಒ ಕಂಪನಿ ತೆವ್ರೆದಿದ್ದರು. ಕಟ್ಟಡದ ಎರಡು ಮಹಡಿಗಳಲ್ಲಿ 20-25 ಉದ್ಯೋಗಿಗಳು ಕೆಲಸ ಮಾಡುತ್ತಿದ್ದರು. ಆನ್ ಲೈನ್ ಕೆಲಸವೆಂದು ಹೇಳಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದರು. ಬಳಿಕ ಸಾರ್ವಜನಿಕರನ್ನು ಹೇಗೆ ವಂಚಿಸಬೇಕೆಂದು ತರಬ್ರ‍್ತಿಯನ್ನು ನೀಡುತ್ತಿದ್ದರು. ವಿದೇಶಿ ಪ್ರಜೆಗಳಿಗೆ ರಾತ್ರಿ ವೇಳೆ ಪೊಲೀಸರು ಸೇರಿದಂತೆ ವಿವಿಧ ತನಿಖಾ ಏಜೆನ್ಸಿ ಹೆಸರಲ್ಲಿ ಕರೆ ಮಾಡಿ ಅಪರಾಧ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದೀರಿ. ನಿಮಗೆ ಪಾರಾಗಲು ಸಹಾಯಮಾಡುವುದಾಗಿ ಹೇಳಿ ನಂಬಿಸಿ ಲಕ್ಷ ಲಕ್ಷ ಹಣ ಪಡೆದು ವಂಚಿಸುತ್ತಿದ್ದರು. ಸದ್ಯ ಕಂಪನಿ ಮೇಲೆ ದಾಳಿ ನಡೆಸಿದ ಪೊಲೀಸರು ೧೬ ಆರೋಪಿಗಳನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read