ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ ಪ್ರಕರಣ: ಮ್ಯಾನೇಜರ್ ಅರೆಸ್ಟ್

ದಾವಣಗೆರೆ: ಸ್ನೇಹಿತರ ಹೆಸರಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ್ದ ಬ್ಯಾಂಕ್ ಮ್ಯಾನೇಜರ್ ನನ್ನು ದಾವಣಗೆರೆ ಜಿಲ್ಲೆಯ ಜಗಳೂರು ಪೊಲಿಸರು ಬಂಧಿಸಿದ್ದಾರೆ.

ಕೆ ಎಲ್ ಎಂ ಆಕ್ಟಿವ್ ಫಿನ್ ವೆಸ್ಟ್ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಅರವಿಂದ್ ಬಂಧಿತ ಆರೋಪಿ. ಈತ ಫೈನಾನ್ಸ್ ಕಂಪನಿಯ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಫೈನಾನ್ಸ್ ಕಂಪನಿಯ ಪ್ರಾದೇಶಿಕ ವ್ಯವಸ್ಥಾಪಕರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಅರವಿಂದ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಬೇರೆ ಊರಿಗೆ ತೆರಳಲೆಂದು ಚಿತ್ರದುರ್ಗ ಬಸ್ ನಿಲ್ದಾಣಕ್ಕೆ ಬಂದಿದ್ದ ಆರೋಪಿಯನ್ನು ಜಗಳೂರು ಪೊಲೀಸರು ಬಸ್ ನಿಲ್ದಾಣದಲ್ಲೇ ಬಂಧಿಸಿದ್ದಾರೆ. ಸದ್ಯ ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read