HomeKarnatakaಪಟ್ಟಿಯಲ್ಲಿ ನಿಮ್ಮ ಹೆಸರಿದೆ ಹಣ ಕೊಡಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ...

ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಹಣ ಕೊಡಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚನೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲಿಯೇ ಸಕ್ರಿಯರಾಗಿರುವ ವಂಚಕರು ಎಐಸಿಸಿ ಹೆಸರಲ್ಲಿ ಕರೆ ಮಾಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳನ್ನು ವಂಚಿಸುತ್ತಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ದೆಹಲಿಯ ಎಎಸಿಸಿ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಆಕಾಂಕ್ಷಿಗಳಿಗೆ ತಿಳಿಸಿ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ. ನಿಮ್ಮ ಗುರುತಿನ ಚೀಟಿಯೊಂದಿಗೆ ಹಣ ಕಳುಹಿಸಿ ಎಂದು ಬೇಡಿಕೆ ಇಡುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಪಟ್ಟಿಯಲ್ಲಿ ನಿಮ್ಮ ಹೆಸರಿದೆ. ಇದಕ್ಕಾಗಿ ಹಣ ಕೊಡಿ ಎಂದು ಕೇಳಲಾಗುತ್ತಿದೆ. ಈ ಬಗ್ಗೆ ಮಾಹಿತಿ ಪಡೆದ ಪಕ್ಷದ ನಾಯಕರು, ಇಂತಹ ವಂಚಕರ ಬಗ್ಗೆ ಎಚ್ಚರಿಕೆ ವಹಿಸುವಂತೆ ಟಿಕೆಟ್ ಆಕಾಂಕ್ಷಿಗಳಿಗೆ ಮತ್ತು ಮುಖಂಡರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular