HomeKarnatakaಇಟ್ಟಿಗೆಗೆ ಪಾಲಿಶ್ ಹಾಕಿ ನಕಲಿ ಚಿನ್ನ ಮಾರಾಟಕ್ಕೆ ಯತ್ನ: ಬಿಹಾರದ ಮೂವರು ಅರೆಸ್ಟ್

ಇಟ್ಟಿಗೆಗೆ ಪಾಲಿಶ್ ಹಾಕಿ ನಕಲಿ ಚಿನ್ನ ಮಾರಾಟಕ್ಕೆ ಯತ್ನ: ಬಿಹಾರದ ಮೂವರು ಅರೆಸ್ಟ್

 ಬೆಂಗಳೂರು: ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿ ಮಾರಾಟಕ್ಕೆ ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಬಿಕುಲ್ ಇಸ್ಲಾಂ, ಇದೀಶ್ ಅಲಿ, ಅನ್ವರ್ ಹುಸೇನ್ ಬಂಧಿತ ಆರೋಪಿಗಳು. ಮನೆ ಪಾಯ ಹಾಕುವಾಗ ಚಿನ್ನದ ನಿಧಿ ಸಿಕ್ಕಿದೆ ಎಂದು ಆರೋಪಿಗಳು ಹೇಳಿಕೊಂಡಿದ್ದು, ಚಿನ್ನದ ಬೆಲೆಗಿಂತ ಅರ್ಧ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ನಂಬಿಸಿದ್ದರು.

ಮರದ ಹಲಗೆ ಹಾಗೂ ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿದ್ದ ಖದೀಮರು ನಂಬಿಕೆ ಗಳಿಸಲು ಮೊದಲು ಒಂದೆರಡು ಗ್ರಾಂ ಅಸಲಿ ಚಿನ್ನ ನೀಡಿದ್ದರು. ನಂತರ ನಕಲಿ ಚಿನ್ನ ಮಾರಾಟ ಮಾಡಲು ಯತ್ನಿಸಿದ್ದರು. ಚಿನ್ನ ತೆಗೆದುಕೊಳ್ಳಲು ಬರುವಂತೆ ಹೇಳಿ ಪದೇ ಪದೇ ಲೊಕೇಶನ್ ಚೇಂಜ್ ಮಾಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಟ್ಟಿಗೆ ಹಾಗೂ ಮರದ ತುಂಡಿಗೆ ಬಣ್ಣ ಬಳಿದು ಮಾರಲು ಯತ್ನಿಸಿದ್ದರು. ಮಾಹಿತಿಯ ಮೇರೆಗೆ ಕೋರಮಂಗಲದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿದೆ. ಸದ್ಯ ಮೂವರನ್ನು ಬಂಧಿಸಿದ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular