HomeKarnatakaಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ ವಂಚನೆ: 1.28 ಕೋಟಿ ರೂ. ಕಳೆದುಕೊಂಡ ವ್ಯಕ್ತಿ

ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ ವಂಚನೆ: 1.28 ಕೋಟಿ ರೂ. ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: ಆನ್ಲೈನ್ ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಲು ಹೋಗಿ ವ್ಯಕ್ತಿಯೊಬ್ಬರು ವಂಚನೆಗೊಳಗಾಗಿ 1.28 ಕೋಟಿ ರೂ. ಕಳೆದುಕೊಂಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಶಿವಪುರದ ಸಿ.ಎನ್. ಕಲ್ಲೇಗೌಡ ಹಣ ಕಳೆದುಕೊಂಡವರು. ಸಾಮಾಜಿಕ ಜಾಲತಾಣ ಫೇಸ್ಬುಕ್ ನೋಡುವಾಗ FYERS ಎಂಬ ಆನ್ಲೈನ್ ಟ್ರೇಡಿಂಗ್ ಇದ್ದ ಜಾಹಿರಾತಿನ ಮೇಲೆ ಕ್ಲಿಕ್ ಮಾಡಿದ್ದಾರೆ. ನಂತರ FYERS ಸೆಕ್ಯೂರಿಟಿ ಗ್ರೂಪ್ ಎಂಬ ವಾಟ್ಸಾಪ್ ಗ್ರೂಪ್ ಗೆ ಸೇರ್ಪಡೆಯಾಗಿದ್ದಾರೆ.

ಮೋಸಗಾರರು ಕಳುಹಿಸಿದ್ದ ಲಿಂಕ್ ನಲ್ಲಿ ಅಕೌಂಟ್ ಓಪನ್ ಮಾಡಿಕೊಂಡಿದ್ದು, ಇದರಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಕಲ್ಲೇಗೌಡ ಜನವರಿ 7ರಂದು 60,000 ರೂ. ಹೂಡಿಕೆ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರು 17,800 ರೂ.ಗಳನ್ನು ಹಾಕಿದ್ದು, ಇನ್ನೂ ಹೆಚ್ಚು ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಪಡೆಯಬಹುದು ಎಂದು ಆಸೆ ಹುಟ್ಟಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಾಗಿ ಹಂತ ಹಂತವಾಗಿ ಕಲ್ಲೇಗೌಡ ಮತ್ತು ಆತನ ಸ್ನೇಹಿತ ವಿವಿಧ ಖಾತೆಗಳಿಗೆ 1.28 ಕೋಟಿ ರೂ. ವರ್ಗಾವಣೆ ಮಾಡಿದ್ದು, ಈ ಹಣಕ್ಕೆ ಯಾವುದೇ ಲಾಭಾಂಶ ನೀಡಿಲ್ಲ. ಹಣ ವಿತ್ ಡ್ರಾ ಮಾಡಲು ಹೋದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಕಲ್ಲೇಗೌಡ ಮತ್ತು ಸ್ನೇಹಿತನಿಗೆ ಹೆಚ್ಚಿನ ಲಾಭ ಕೊಡುವುದಾಗಿ ವಂಚಿಸಿ 1.28 ಕೋಟಿ ರೂ. ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಲಾಗಿದೆ. ಈ ಕುರಿತಾಗಿ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular