ಅನೇಕಲ್ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್ ಬಿ ಐ ಹೆಸರು ಹೇಳಿಕೊಂಡು ವಂಚನೆ ಎಸಗಿ ಕೋಟಿ ಕೋಟಿ ಹಣ ಲೂಟಿ ಮಾಡಿದ ಘಟನೆ ನಡೆದಿದೆ.
ಬೆಂಗಳೂರು ಹೊರವಲಯದ ಅನೇಕಲ್ ನಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಹೊಸೂರು ಮೂಲದ ಪವಿತ್ರ ಎಂಬಾಕೆ ವಂಚಿಸಿದ್ದು, ನಿರ್ಮಲಾ ಸೀತಾರಾಮನ್ ಅವರ ನಕಲಿ ಸಹಿ ಇರುವ ಪತ್ರಗಳನ್ನು ಸೃಷ್ಟಿಸಿ ಸಬ್ಸಿಡಿ ಕೊಡುತ್ತೇನೆ, ಸಾಲ ಕೊಡುತ್ತೇನೆ ಎಂದು ಮೋಸ ಮಾಡಿದ್ದಾಳೆ. ಬ್ಲೂ ವಿಂಗ್ಸ್ ಎಂಬ ಹೆಸರಿನಲ್ಲಿ ಟ್ರಸ್ಟ್ ಮಾಡಿಕೊಂಡು ಜನರಿಗೆ ಮೋಸ ಮಾಡಿದ್ದಾಳೆ.ಒಬ್ಬರಿಗೆ 10 ಲಕ್ಷ ಲೋನ್ ನೀಡಿದ್ರೆ 5 ಲಕ್ಷ ಸಬ್ಸಿಡಿ ಎಂದು ಹೇಳಿ, ಹಣ ಡೆಪಾಸಿಟಿ ಮಾಡುವಂತೆ ಯುವತಿ ವಂಚಿಸಿದ್ದಾಳೆ.
ಅತ್ತಿಬೆಲೆ, ಧರ್ಮಾಪುರ, ಹೊಸೂರು ಸೇರಿದಂತೆ ಹಲವು ಕಡೆ ಈಕೆ ವಂಚಿಸಿದ್ದಾಳೆ ಎಂದು ತಿಳಿದು ಬಂದಿದ್ದು, ವಂಚಕಿ ಪವಿತ್ರ ಹಾಗೂ ಆಕೆಯ ಜೊತೆಗಾರರಾದ ಪ್ರವೀಣ್, ಯಲ್ಲಪ್ಪ, ಮಮತಾ ಸೇರಿ 14 ಮಂದಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.