HomeKarnatakaವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ ವಂಚನೆ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ ವಂಚನೆ

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ 80 ಸಾವಿರ ರೂ. ವಂಚಿಸಿದ ಘಟನೆ ನಡೆದಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ವಿದೇಶದಲ್ಲಿ ಉದ್ಯೋಗಕ್ಕಾಗಿ ನೌಕರಿ.ಡಾಟ್ ಕಾಂ ಮೂಲಕ ಪುಷ್ಪಾ ಎಂಬುವರು ಅರ್ಜಿ ಸಲ್ಲಿಸಿದ್ದು, ಅವರಿಗೆ ಉದ್ಯೋಗ ನೀಡದೆ 80 ಸಾವಿರ ರೂಪಾಯಿ ಮರಳಿಸದೆ ಅಪರಿಚಿತರು ವಂಚಿಸಿದ್ದಾರೆ. ಮೊಬೈಲ್ ಗೆ ಬಂದಿದ್ದ ಸಂದೇಶದಲ್ಲಿದ್ದ ಮೊಬೈಲ್ ಸಂಖ್ಯೆಗೆ ಪುಷ್ಪಾ ಕರೆ ಮಾಡಿದಾಗ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದಾರೆ.

ವೀಸಾ ಪ್ರೊಸೆಸ್, ಮೆಡಿಕಲ್ ಫಿಟ್ನೆಸ್ ಮೊದಲಾದವುಗಳಿಗೆಂದು ಕ್ಯೂಆರ್ ಕೋಡ್ ಕಳಿಸಿದ್ದು, ಅದನ್ನು ಸ್ಕ್ಯಾನ್ ಮಾಡಿ ಗೂಗಲ್ ಪೇ ಮೂಲಕ ಹಣ ವರ್ಗಾಯಿಸಲಾಗಿದೆ. ವಂಚನೆಗೊಳಗಾದ ಪುಷ್ಪಾ ಅವರು ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular