ಸೇವೆ ಕಾಯಂ ಮಾಡಿಸುವುದಾಗಿ ಹಣ ಪಡೆದು ವಂಚನೆ: ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷರ ವಿರುದ್ಧ ದೂರು

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮತ್ತು ಇತರೆ ಪದಾಧಿಕಾರಿಗಳ ವಿರುದ್ಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಸಂಘದ ಅಧ್ಯಕ್ಷ ಗದಗದ ಹನುಮಂತಗೌಡ ಕಲ್ಮನಿ, ಕಾರ್ಯದರ್ಶಿ ಹುಬ್ಬಳ್ಳಿಯ ಪೀಟರ್ ವಿನೋದ್ ಚಂದ್, ಸಾಗರ ತಾಲೂಕಿನ ಮರತ್ತೂರು ಗ್ರಾಮದ ಶಾಲಿನಿ ಕೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಾಗರದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಎಸ್ಎಂ ಗಣಪತಿ, ಅಶೋಕ್ ಎ., ಅನುಷಾ ಎಲ್.ವಿ., ಕೌಶಿಕ್, ಭವ್ಯಾ ಅವರ ಸೇವೆ ಕಾಯಂ ಮಾಡಿಸುವುದಾಗಿ ಹೇಳಿ ಆರೋಪಿಗಳು 17.50 ಲಕ್ಷ ರೂಪಾಯಿ ಹಣವನ್ನು ಬ್ಯಾಂಕ್ ಖಾತೆ ಮೂಲಕ ಪಡೆದುಕೊಂಡಿದ್ದಾರೆ. ತಾವು ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಯಾಗಿರುವುದರಿಂದ ಉನ್ನತ ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ಆಯುಕ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ನಿಮ್ಮ ಸೇವೆಯನ್ನು ಕಾಯಂ ಮಾಡಿಸುತ್ತೇವೆ ಎಂದು ನಂಬಿಸಿ ಹಣ ಪಡೆದುಕೊಂಡಿದ್ದು, ಸೇವೆ ಕಾಯಂ ಮಾಡಿಸಿಲ್ಲ, ಹಣ ವಾಪಸ್ ಕೊಡದೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read