HomeLatest NewsBREAKING : ಕರ್ನಾಟಕದ ರಾಜ್ಯಪಾಲರ ಹೆಸರಿನಲ್ಲಿ ನಕಲಿ 'ಫೇಸ್ ಬುಕ್' ಖಾತೆ ತೆರೆದು ವಂಚನೆ, FIR...

BREAKING : ಕರ್ನಾಟಕದ ರಾಜ್ಯಪಾಲರ ಹೆಸರಿನಲ್ಲಿ ನಕಲಿ ‘ಫೇಸ್ ಬುಕ್’ ಖಾತೆ ತೆರೆದು ವಂಚನೆ, FIR ದಾಖಲು.!

ಬೆಂಗಳೂರು : ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚನೆ ಎಸಗಲು ಯತ್ನಿಸಲಾಗಿದ್ದು,ಕೇಂದ್ರ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ನೀಡಿದ ದೂರು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜ್ಯಪಾಲರ ಹೆಸರಿನಲ್ಲಿ ಫೇಸ್ ಬುಕ್ ಖಾತೆ ತೆರೆದು ಕಿಡಿಗೇಡಿಯೋರ್ವ ಸಾರ್ವಜನಿಕರಿಗೆ ಸಂದೇಶ ಕಳುಹಿಸುತ್ತಿರುವುದು ಗೊತ್ತಾಗಿದೆ. ಎಫ್ ಐ ಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular