HomeKarnatakaಪೋಷಕರೇ ಗಮನಿಸಿ : 5 -17 ವರ್ಷದ ಮಕ್ಕಳಿಗೆ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಲು ಸೆ....

ಪೋಷಕರೇ ಗಮನಿಸಿ : 5 -17 ವರ್ಷದ ಮಕ್ಕಳಿಗೆ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಲು ಸೆ. 30 ಕೊನೆಯ ದಿನ !

ಬಳ್ಳಾರಿ :   ಜಿಲ್ಲೆಯಾದ್ಯಂತ 5 ರಿಂದ 17 ವರ್ಷ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ.

ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೆಪ್ಟೆಂಬರ್ 30 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ಆಧಾರ್ ಕಾರ್ಡ್ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದರಿಂದ ಶಾಲಾ ದಾಖಲಾತಿ, ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರಿ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನ ಸೇರಿದಂತೆ ಶೈಕ್ಷಣಿಕ ಸವಲತ್ತುಗಳ ಲಾಭ ಪಡೆಯಲು ಅಪ್ಡೇಟ್ ಮಾಡುವುದು ಅತ್ಯಗತ್ಯವಾಗಿದೆ.

ಹಾಗಾಗಿ ಪೋಷಕರು ಕೂಡಲೇ ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಮಕ್ಕಳಿಗೆ ಸರಿಯಾದ ಸಮಯಕ್ಕೆ ತಲುಪುವಂತೆ ಮಾಡಲು ಪೋಷಕರು ಈ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ಲಿಡ್‌ಕರ್ ಎಂಪೋರಿಯಂನಲ್ಲಿ ಚರ್ಮವಸ್ತುಗಳ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ

ಬಳ್ಳಾರಿ :  ಕಾರ್ಮಿಕರ ದಿನಾಚರಣೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಬಳ್ಳಾರಿಯ ಲಿಡ್‍ಕರ್ ಲೆದರ್ ಎಂಪೋರಿಯಂನಲ್ಲಿ ಗ್ರಾಹಕರಿಗಾಗಿ ಎಲ್ಲಾ ಚರ್ಮದ ಉತ್ಪನ್ನಗಳ ಮೇಲೆ ಶೇ. 15 ರಷ್ಟು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಹಮ್ಮಿಕೊಳ್ಳಲಾಗಿದೆ.

ನಗರದ ಬುಡಾ ಕಾಂಪ್ಲೆಕ್ಸ್‌ನಲ್ಲಿರುವ ಲಿಡ್‌ಕರ್ ಮಳಿಗೆಯಲ್ಲಿ ಏ.30 ರಿಂದ ಮೇ 31 ರವರೆಗೆ ಈ ವಿಶೇಷ ರಿಯಾಯಿತಿ ದರಗಳು ಅನ್ವಯವಾಗಲಿವೆ. ಮಳಿಗೆಯಲ್ಲಿ ಲಭ್ಯವಿರುವ ಗುಣಮಟ್ಟದ ಚರ್ಮದ ಪಾದರಕ್ಷೆಗಳು, ಬ್ಯಾಗ್‌ಗಳು, ಬೆಲ್ಟ್‌ಗಳು ಹಾಗೂ ಇನ್ನಿತರ ಎಲ್ಲಾ ಚರ್ಮದ ವಸ್ತುಗಳ ಖರೀದಿ ಮೇಲೆ ಗ್ರಾಹಕರು ಶೇ.15 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಹೆಚ್.ಆರ್. ಗವಿಯಪ್ಪ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ: 24ರ ಲಿಡ್‍ಕರ್ ಲೆದರ್ ಎಂಪೋರಿಯಮ್ ಮಳಿಗೆ ಅಥವಾ ದೂ.08392-271741, ಮೊ.98446 67691 ಅನ್ನು ಸಂಪರ್ಕಿಸಬಹುದಾಗಿದೆ. ಇದು ಸರ್ಕಾರಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ಮಾರಾಟವಾಗಿದ್ದು, ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲಿಡ್‌ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular