ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.
ಭಾನುವಾರ ಸಚಿವ ರಹಿಮ್ ಖಾನ್ ಜೊತೆಯಲ್ಲಿ ವಿದ್ಯಾರ್ಥಿ ಸುಚಿವ್ರತ್ ಮನೆಗೆ ಭೇಟಿ ನೀಡಿದ ಅವರು ವಿದ್ಯಾರ್ಥಿ ಮತ್ತು ಕುಟುಂಬ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದೆ. ಇದು ನೋವಿನ ಸಂಗತಿಯಾಗಿದ್ದು, ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗಬಾರದು ಎನ್ನುವುದು ನಮ್ಮೆಲ್ಲರ ಭಾವನೆಯಾಗಿದ್ದು, ಭಾಲ್ಕಿಯ ಭೀಮಣ್ಣ ಖಂಡ್ರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟು ನೀಡುವುದಾಗಿ ಭರವಸೆ ನೀಡಿದ್ದಾರೆ.
ವಿದ್ಯಾರ್ಥಿಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಅವಕಾಶವಿದೆಯೇ ಎನ್ನುವ ಸಾಧ್ಯತೆಗಳ ಕುರಿತು ಪರಿಶೀಲಿಸಲಾಗುತ್ತಿದೆ. ಕಾಮೆಡ್ -ಕೆ ಪರೀಕ್ಷೆ ಬರೆಯಲು ಅವಕಾಶವಿದೆ. ಆ ಸೀಟು ಲಭಿಸಿದರೂ ಕೂಡ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.
ಬೀದರ್ ಜನಿವಾರ ಪ್ರಕರಣ ಸಂಬಂಧ, ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿ ಅವರ ಮನೆಗೆ ಇಂದು ಸಚಿವ ರಹೀಂ ಖಾನ್ ಅವರೊಂದಿಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಲಾಯಿತು.
— Eshwar Khandre (@eshwar_khandre) April 20, 2025
ಜನಿವಾರ ತೆಗೆಯದ ಕಾರಣದಿಂದ ಕೆಸಿಇಟಿ ಗಣಿತ ಪರೀಕ್ಷೆಗೆ ಅವಕಾಶ ದೊರೆಯದ ಸುಚಿವ್ರತ್ ಗೆ ನಮ್ಮ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಸೀಟ್ ನೀಡಲಾಗುತ್ತದೆ.… pic.twitter.com/eMqhIdk1Bg