ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಯೋಜನೆ ಘೋಷಣೆ ಮಾಡಿದೆ. ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಣೆ ಮಾಡಿದೆ.
ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ ಕೆಜಿಯಿಂದ ಪಿಯುಸಿವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಆದ್ಯತೆ ನೀಡಲಾಗುತ್ತಿದೆ.
ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧವಾಗಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ ಕೆಜಿಯಿಂದ ಪಿಯುಸಿವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.