HomeLatest Newsಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಅರ್ಜಿ ಆಹ್ವಾನ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ ‘ಸೇವಾಸಿಂಧು’ ಪೋರ್ಟಲ್ https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

2025ರ ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್ ಗಳನ್ನು ನೀಡುತ್ತಿದೆ.

ರಾಜ್ಯದ ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ‘ಸೇವಾಸಿಂಧು’ ಪೋರ್ಟಲ್ ಮೂಲಕ 2026 ರ ಜೂನ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುರುಗೋಡು ಪುರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ 2026-27ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಬಡ ಜನರು ಮತ್ತು ವಿಶೇಷಚೇತನರಿಗೆ ವಿವಿಧ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

*ಸೌಲಭ್ಯಗಳು:*

ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ರಾಜ್ಯ ಅಥವಾ ರಾಷ್ಟç ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರ ವ್ಯಾಸಂಗೇತರ ಸ್ಪರ್ಧೆಗಳಲ್ಲಿ ಭಾಗವಹಿಸಿದ ಅಥವಾ ಜಯಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.

ವಿಕಲಚೇತನರಿಗೆ ವಾಟರ್ ಬೆಡ್ ವಿತರಣೆ: ಕುರುಗೋಡು ಪಟ್ಟಣದ ವಿಕಲಚೇತನರಿಗೆ ವಾಟರ್ ಬೆಡ್‌ಗಳನ್ನು ಪೂರೈಸಲಾಗುವುದು.

*ಅಗತ್ಯವಿರುವ ದಾಖಲಾತಿಗಳು:

ಅರ್ಜಿದಾರರು ಕುರುಗೋಡು ಪುರಸಭೆ ವ್ಯಾಪ್ತಿಯ ನಿವಾಸಿಯಾಗಿರಬೇಕು. ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

ವಿದ್ಯಾರ್ಥಿಗಳ ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಹಿಂದಿನ ತರಗತಿಯ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳು, ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ, ವಿಕಲಚೇತನರು ಶೇ.75 ಕ್ಕಿಂತ ಹೆಚ್ಚು ವಿಕಲಚೇತನರಾಗಿದ್ದು, ವೈದ್ಯಾಧಿಕಾರಿಗಳು (ತಾಲೂಕು/ಜಿಲ್ಲಾ ಆಸ್ಪತ್ರೆ) ನೀಡಿದ ಅಂಗವೈಕಲ್ಯ ಪ್ರಮಾಣ ಪತ್ರದ ಪ್ರತಿ.

ಅರ್ಜಿ ಸಲ್ಲಿಸಲು ಜೂ.09 ರಂದು ಸಂಜೆ 4:30 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ನಿಗದಿಪಡಿಸಿದ ದಿನಾಂಕದ ನಂತರ ಬರುವ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು.ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ಪುರಸಭೆ ಕಾರ್ಯಾಲಯದ ಸೂಚನಾ ಫಲಕವನ್ನು ನೋಡಬಹುದು ಅಥವಾ ಸಂಬಂಧಿಸಿದ ಶಾಖೆಯ ಸಿಬ್ಬಂದಿಯಿAದ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular