HomeKarnatakaFree Bus Travel: ಮಹಿಳೆಯರ ಗಮನಕ್ಕೆ; ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಈ ದಾಖಲೆ ನಿಮ್ಮ...

Free Bus Travel: ಮಹಿಳೆಯರ ಗಮನಕ್ಕೆ; ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಈ ದಾಖಲೆ ನಿಮ್ಮ ಬಳಿ ಇರಲಿ

ಬಳ್ಳಾರಿ : ‘ಶಕ್ತಿ ಯೋಜನೆ’ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ (Free Bus Travel )ಸೌಲಭ್ಯವನ್ನು ಜೂನ್ 11 ರಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗುತ್ತಿದೆ.

ಬಳ್ಳಾರಿ ವಿಭಾಗದ ವ್ಯಾಪ್ತಿಯಲ್ಲಿನ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ತಮ್ಮ ಮೂಲ ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಟಿಕೇಟ್ ಪಡೆದು ಪ್ರಯಾಣ ಮಾಡಬಹುದಾಗಿದೆ.

ದಾಖಲಾತಿಗಳ ವಿವರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಧಾರ್ ಕಾರ್ಡ, ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಿಗೆ ಪತ್ರ, ವಾಸಸ್ಥಳ ನಮೂದಿಸಿರುವ ಭಾರತ ಸರ್ಕಾರದ ಇಲಾಖೆಗಳು, ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು (ಪಿ.ಎಸ್.ಯು.ಎಸ್) ವಿತರಿಸಿರುವ ಗುರುತಿನ ಚೀಟಿ ಅಥವಾ ವಾಸಸ್ಥಳ ನಮೂದಿಸಿರುವಂತಹ ಕರ್ನಾಟಕ ಸರ್ಕಾರದ ಇಲಾಖೆಗಳು, ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ ಅಥವಾ ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರೀಕ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಈ ಎಲ್ಲಾ ಗುರುತಿನ ಚೀಟಿಗಳಲ್ಲಿ ಯಾವುದಾದರು ಒಂದನ್ನು ತೋರಿಸಿ “ಶೂನ್ಯ ಮೊತ್ತದ ಟಿಕೇಟ್’’ ಪಡೆದು ಮಹಿಳೆಯರು ಜೂನ್ 11ರ ಮಧ್ಯಾಹ್ನ 01 ಗಂಟೆಯಿಂದ ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ.ದೇವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular