HomeKarnataka'SSLC' ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ : KSRTC ಸುತ್ತೋಲೆ

‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ : KSRTC ಸುತ್ತೋಲೆ

ಬೆಂಗಳೂರು : ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04,2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವುದು.

ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ಕೆಎಸ್ ಆರ್ ಟಿಸಿ ಸುತ್ತೋಲೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular