ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಖಾಸಗಿ ಬಸ್​ ಮಾಲೀಕರಿಂದ ಪ್ರತಿಭಟನೆ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ನೀಡುತ್ತಿದ್ದರಂತೆಯೇ ಖಾಸಗಿ ಬಸ್​ಗಳ ಮಾಲೀಕರಿಗೆ ಭಯ ಶುರುವಾಗಿದೆ. ಕರ್ನಾಟಕದ ಖಾಸಗಿ ಬಸ್ ಮಾಲೀಕರು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ಯೋಜನೆಯಿಂದ ತಮಗಾಗುತ್ತಿರುವ ನಷ್ಟದ ಪರಿಹಾರವನ್ನು ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ರಾಜ್ಯ ಸರ್ಕಾರವು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಜಾರಿಗೊಳಿಸಿದ್ದರಿಂದ ಖಾಸಗಿ ಬಸ್‌ಗಳಿಗೆ ತೊಂದರೆಯಾಗಿದೆ. ಏಕೆಂದರೆ ಮಹಿಳೆಯರು ಅದೇ ಬಸ್​ಗೆ ಹೋಗುತ್ತಾರೆ. ಇದರಿಂದ ಖಾಸಗಿ ಬಸ್ ಮಾಲೀಕರು ತಮ್ಮ ವ್ಯಾಪಾರವನ್ನು ಕಳೆದುಕೊಳ್ಳುವಂತಾಗುತ್ತದೆ ಎಂದಿದ್ದಾರೆ.

ಸರಕಾರ ಈ ಯೋಜನೆ ಜಾರಿಗೊಳಿಸಿದ ಬಳಿಕ ಸರಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದೆಂಬ ಕಾರಣಕ್ಕೆ ಯಾವುದೇ ಮಹಿಳೆಯರು ತಮ್ಮ ಸೇವೆಗೆ ಆದ್ಯತೆ ನೀಡುವುದಿಲ್ಲ ಎಂಬುದು ಖಾಸಗಿ ಬಸ್‌ಗಳ ಮಾಲೀಕರ ಅಭಿಪ್ರಾಯ. ನಮಗೆ ಇದರ ಪರಿಹಾರ ನೀಡುವ ಮೂಲಕ ಖಾಸಗಿಯವರಿಗೂ ಯೋಜನೆ ವಿಸ್ತರಿಸಬೇಕು ಅಥವಾ ಖಾಸಗಿ ಬಸ್‌ಗಳನ್ನು ತೆರಿಗೆ ಮುಕ್ತಗೊಳಿಸುವ ಮೂಲಕ ವಿನಾಯಿತಿ ನೀಡಬೇಕು ಎಂದು ಖಾಸಗಿ ಬಸ್ ಮಾಲೀಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೇಡಿಕೆಗಳನ್ನು ಅಂಗೀಕರಿಸದಿದ್ದಲ್ಲಿ ವಿಧಾನಸೌಧದ ಮುಂದೆ ವಾಹನಗಳನ್ನು ಬಿಟ್ಟು ಬೃಹತ್ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read