HomeKarnatakaಗ್ರಾಮೀಣ ಭಾಗದ ಯುವಕ-ಯುವತಿಯರಿಗಾಗಿ ಉಚಿತ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ : ಅರ್ಜಿ...

ಗ್ರಾಮೀಣ ಭಾಗದ ಯುವಕ-ಯುವತಿಯರಿಗಾಗಿ ಉಚಿತ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ : ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯು ಗ್ರಾಮೀಣ ಭಾಗದ ಯುವಕ-ಯುವತಿಯರಿಗಾಗಿ 12 ದಿನಗಳ ಉಚಿತ “ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ” ತರಬೇತಿಯನ್ನು ಆಯೋಜಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಈ ತರಬೇತಿ ಕಾರ್ಯಕ್ರಮವು ಜೂನ್ 12 ರಿಂದ ಪ್ರಾರಂಭವಾಗಲಿದ್ದು 18 ರಿಂದ 45 ವರ್ಷದೊಳಗಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಸಂಸ್ಥೆಯ ವತಿಯಿಂದಲೇ ಒದಗಿಸಲಾಗುತ್ತದೆ.ತರಬೇತಿ ಪೂರ್ಣಗೊಂಡ ನಂತರ ಅಭ್ಯರ್ಥಿಗಳು ಸ್ವಂತ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ ಮತ್ತು ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ.

ತರಬೇತಿ ಅವಧಿಯಲ್ಲಿ ಹೈನುಗಾರಿಕೆಯ ಮೂಲಭೂತ ಜ್ಞಾನ, ಹಸುಗಳ ಆರೈಕೆ, ಆಹಾರ ನಿರ್ವಹಣೆ, ಹಾಲು ಉತ್ಪಾದನೆ, ಪಶು ಆರೋಗ್ಯ ಸಂರಕ್ಷಣೆ, ಗೋಶಾಲೆ ನಿರ್ವಹಣೆ, ಎರೆಹುಳ ಗೊಬ್ಬರ ತಯಾರಿಕೆ ವಿಧಾನ, ಸಾವಯವ ಕೃಷಿಯ ಮಹತ್ವ, ಗೊಬ್ಬರ ಘಟಕ ಸ್ಥಾಪನೆ ಹಾಗೂ ಸಣ್ಣ ಉದ್ಯಮ ಆರಂಭಿಸುವ ಕುರಿತು ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತದೆ.ಆಸಕ್ತ ಅಭ್ಯರ್ಥಿಗಳು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು, ಅದರ ಫೋಟೋ ತೆಗೆದು ಈ ಕೆಳಗಿನಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮಾಡುವ ಮೂಲಕ ಅಥವಾ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಮೊದಲು ಅರ್ಜಿ ಸಲ್ಲಿಸುವವರಿಗೆ ಆದ್ಯತೆ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ಗೂಗಲ್ ಫಾರ್ಮ್ ಲಿಂಕ್ (https://forms.gle/5qMgpA1XhR4RaBbk8) ಅಥವಾ CBD RSETI Haliyal ವಾಟ್ಸಾಪ್ ಚಾನೆಲ್‌ನಲ್ಲಿರುವ ಲಿಂಕ್ ಬಳಸಬಹುದು.ಹೆಚ್ಚಿನ ವಿವರಗಳಿಗಾಗಿ ಮತ್ತು ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ: 8970145354 / 9483485489 ವೆಬ್‌ಸೈಟ್: www.rsetihaliyal.org ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ, ಉದ್ಯೋಗ ವಿದ್ಯಾನಗರ, ಹಳಿಯಾಳ – 581329, ಉತ್ತರ ಕನ್ನಡ ಜಿಲ್ಲೆ ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular