HomeKarnatakaಶಾಲೆಗಳ ರೀತಿ ಅಂಗನವಾಡಿಗಳಿಗೂ ಉಚಿತ ವಿದ್ಯುತ್: ಪರಿಶೀಲನೆಗೆ ಸಿಎಂ ಸೂಚನೆ

ಶಾಲೆಗಳ ರೀತಿ ಅಂಗನವಾಡಿಗಳಿಗೂ ಉಚಿತ ವಿದ್ಯುತ್: ಪರಿಶೀಲನೆಗೆ ಸಿಎಂ ಸೂಚನೆ

ಮೈಸೂರು: ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಅವರು, ರಾಜ್ಯ ಸರ್ಕಾರ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದ್ದು, ಇದೇ ಮಾದರಿಯಲ್ಲಿ ಅಂಗನವಾಡಿ ಕೇಂದ್ರಗಳಿಗೂ ವಿದ್ಯುತ್ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ರಾಜ್ಯದಲ್ಲಿ ಎಷ್ಟು ಅಂಗನವಾಡಿಗಳಿವೆ. ವಿದ್ಯುತ್ ಗೆ ಎಷ್ಟು ವೆಚ್ಚ ಆಗುತ್ತದೆ ಎನ್ನುವ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂಗನವಾಡಿಗಳಿಗೆ ಗುಣಮಟ್ಟರ ಆಹಾರ ಪೂರೈಕೆ ಮಾಡಬೇಕು. ನಿಯಮಿತವಾಗಿ ಗುಣಮಟ್ಟ ಪರೀಕ್ಷಿಸಬೇಕು ಎಂದು ಸಿಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular