ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವುದಾಗಿ ಪ್ರಜಾ ಧ್ವನಿ ಯಾತ್ರೆಯಲ್ಲಿ ಘೋಷಣೆ ಮಾಡಲಾಗಿದೆ.
ಬೆಲೆ ಏರಿಕೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ನೆಮ್ಮದಿ ನೀಡುವ ಯೋಜನೆಯನ್ನು ನಾವು ಘೋಷಿಸಿದ್ದೇವೆ. ರಾಜ್ಯದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲಿದೆ. ನಿಮ್ಮ ವಿದ್ಯುತ್ ಮುಂದೆ ಕಾಂಗ್ರೆಸ್ ಜವಾಬ್ದಾರಿ ಎಂದು ಘೋಷಣೆ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಪ್ರತಿ ಮನೆಗೂ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ ಭರವಸೆ ನೀಡಿದ್ದಾರೆ.
ಕತ್ತಲೆಯಿಂದ ಬೆಳಕಿನೆಡೆಗೆ ಸಾಗಲಿ ಕರ್ನಾಟಕ, ಇದು ಕಾಂಗ್ರೆಸ್ನ ಸದಾಶಯ.
2022ರ ಒಂದೇ ವರ್ಷದ ಅವಧಿಯಲ್ಲಿ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ ಬಿಜೆಪಿ ಸರ್ಕಾರ 4 ವರ್ಷದಲ್ಲಿ 8ಕ್ಕೂ ಹೆಚ್ಚು ಬಾರಿ ದರ ಏರಿಸಿದೆ.
ಮುಂದಿನ ಕಾಂಗ್ರೆಸ್ ಸರ್ಕಾರ ಜನರ ಬದುಕಿಗೆ ಬೆಳಕಾಗಲಿದೆ.#GruhaJyothi#PrajaDhwaniYatre pic.twitter.com/gEC7u7iHkQ
— Karnataka Congress (@INCKarnataka) January 11, 2023