HomeIndiaಸ್ಪರ್ಧಾತ್ಮಕ ಪರೀಕ್ಷೆ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಆನ್ಲೈನ್ ಕೋಚಿಂಗ್ ಯೋಜನೆ ಜಾರಿಗೆ ಕೇಂದ್ರ ಸರ್ಕಾರ...

ಸ್ಪರ್ಧಾತ್ಮಕ ಪರೀಕ್ಷೆ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಆನ್ಲೈನ್ ಕೋಚಿಂಗ್ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್ಲೈನ್ ಕೋಚಿಂಗ್/ ತರಗತಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ಕೈಗೊಂಡಿದೆ.

ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಶಿಕ್ಷಣ ಸಚಿವಾಲಯದ ಅಧಿಕಾರಿಗಳೊಂದಿಗೆ ಪ್ರಲ್ಹಾದ್ ಜೋಶಿ ಮಹತ್ವದ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಯೋಜನೆ ಘೋಷಿಸಿದ್ದರು. ಅದಾಗಿ ನಾಲ್ಕೇ ದಿನಗಳಲ್ಲಿ ಯೋಜನೆ ಜಾರಿಗೆ ಮಹತ್ವದ ಹೆಜ್ಜೆ ಇಡಲಾಗಿದೆ.

ಉಚಿತ ತರಬೇತಿಯಿಂದ ಕುಟುಂಬಗಳ ಆರ್ಥಿಕ ಹೊರೆ ಕಡಿತವಾಗಲಿದೆ. ದೇಶಾದ್ಯಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಲಿಕಾ ವಿಷಯ ಲಭ್ಯವಾಗಲಿದೆ. ತಜ್ಞರಿಂದ ಮಾರ್ಗದರ್ಶನ, ರಚನಾತ್ಮಕ ಪರೀಕ್ಷಾ ಸಿದ್ಧತೆಗೆ ಒತ್ತು ನೀಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಯುವಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಉನ್ನತ ಶಿಕ್ಷಣ ಮತ್ತು ಆಡಳಿತಾತ್ಮಕ ವಿಷಯಗಳು ಅವಕಾಶಗಳ ದೃಷ್ಟಿಯಿಂದ ಯೋಜನೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಯುವಕರಿಗೆ ಉಚಿತ ಆನ್‌ಲೈನ್ ತರಬೇತಿ ನೀಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಪಕ್ರಮದ ಅನುಷ್ಠಾನವನ್ನು ಪರಿಶೀಲಿಸಲು ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ದೇಶಾದ್ಯಂತದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಕಲಿಕಾ ವಿಷಯ, ತಜ್ಞರ ಮಾರ್ಗದರ್ಶನ ಮತ್ತು ರಚನಾತ್ಮಕ ಸಿದ್ಧತೆಯನ್ನು ಪ್ರವೇಶಿಸುವಂತೆ ಮಾಡುವ ಬಲಿಷ್ಠ ರಾಷ್ಟ್ರೀಯ ವೇದಿಕೆಯನ್ನು ನಿರ್ಮಿಸುವತ್ತ ಗಮನಹರಿಸಲಾಯಿತು ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular