HomeKarnatakaರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಯಶಸ್ವಿ ಜಾರಿಗೆ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಯಶಸ್ವಿ ಜಾರಿಗೆ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು ಅದೇಶ ಹೊರಡಿಸಲಾಗಿದೆ.

ಯೋಜನೆಯ ಅನುಷ್ಠಾನ ಈಗಾಗಲೇ ಪ್ರಾರಂಭವಾಗಿದ್ದು, ಸದರಿ ಯೋಜನೆಯನ್ನು ಇನ್ನೂ ನಿಖರವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ(EDCS) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಈ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್-ಲೈನ್‌ನಲ್ಲಿ ದಾಖಲಿಸಬೇಕಾಗಿದೆ.

ಈ ಮೊದಲು ಆನ್-ಲೈನ್ ಪೋರ್ಟ್‌ಲ್‌ ನಲ್ಲಿ 01 ಯು-ಡೈಸ್ ಸಂಖ್ಯೆಗೆ 01 ವಿದ್ಯುತ್ ಸ್ಥಾವರದ ಅಕೌಂಟ್ ಐಡಿಯನ್ನು ನೊಂದಣಿ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಒಂದೇ ಶಾಲೆಯಲ್ಲಿ ಒಂದಕ್ಕಿಂತ ಹೆಚ್ಚಿನ ವಿದ್ಯುತ್ ಸ್ಥಾವರಗಳಿರುವುದರಿಂದ ಹಾಗೂ ಒಂದೇ ಅವರಣದಲ್ಲಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯಿರುವ ಶಾಲೆಗಳು ಒಂದೇ ಯು-ಡೈಸ್ ಹೊಂದಿರುವುದರಿಂದ ಆನ್-ಲೈನ್ ಪೋರ್ಟಲ್‌ನಲ್ಲಿ ನೊಂದಣಿ ಮಾಡಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ ಪ್ರಸ್ತುತ 01 ಯು-ಡೈಸ್ ಸಂಖ್ಯೆಗೆ ಗರಿಷ್ಠ 03 ವಿದ್ಯುತ್ ಸ್ಥಾವರಗಳ ಅಕೌಂಟ್ ಐಡಿಗಳನ್ನು ನೊಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಂಬಂಧಪಟ್ಟ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರುಗಳು ಆನ್-ಲೈನ್ ಪೋರ್ಟಲ್‌ನಲ್ಲಿ ತಿಳಿಸಿರುವ ಅಂಶಗಳಂತೆ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular