ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು https://minority-skill-form.vercel.app/, https://minority-skill-form.vercel.app/ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ದಿನಾಂಕ ನವೆಂಬರ್ 10 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.
ಬಳ್ಳಾರಿ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರ, ಬಳ್ಳಾರಿ (ಮೊಬೈಲ್: 8310321101, ದೂರವಾಣಿ: 08392-200125/224)
ಸಂಡೂರು: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತೋಟಗಾರಿಕೆ ಇಲಾಖೆ, ಸಂಡೂರು (ಮೊಬೈಲ್: 9036925966 / 8660575061)
ಸಿರುಗುಪ್ಪ: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನಗರಸಭೆ ಆವರಣ, ಬಳ್ಳಾರಿ ರಸ್ತೆ, ಸಿರುಗುಪ್ಪ (ಮೊಬೈಲ್: 9148889975)
ಹೆಚ್ಚಿನ ವಿವರಗಳಿಗಾಗಿ ಇಲಾಖೆಯ 24/7 ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾಮುವಿಯಿಂದ ಬ್ಯಾಂಕಿಂಗ್, ಎಸ್.ಎಸ್.ಸಿ., ಆರ್.ಆರ್.ಬಿ. ಪರೀಕ್ಷೆಗಳಿಗೆ 45 ದಿನಗಳ ತರಬೇತಿ: ನವೆಂಬರ್ 9 ರೊಳಗೆ ನೋಂದಣಿಗೆ ಅವಕಾಶ
ಬಳ್ಳಾರಿ: ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ(ಕರಾಮುವಿ) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು 45 ದಿನಗಳ ವಿಶೇಷ ತರಬೇತಿಯನ್ನು ಆಯೋಜಿಸಿದೆ.
ವಿವಿಧ ರಾಷ್ಟ್ರೀಯ ಹಾಗೂ ಖಾಸಗಿ ಬ್ಯಾಂಕ್ ಗಳು, ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ(ಎಸ್ಎಸ್ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಪ್ರಕಟಿಸಿರುವ ನಾನಾ ಹುದ್ದೆಗಳ ಪರೀಕ್ಷೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ತರಬೇತಿ ನೀಡಲಾಗುತ್ತಿದೆ.
ಬ್ಯಾಂಕಿಂಗ್ ತಜ್ಞರು, ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು, ವಿಷಯ ಪರಿಣಿತರು ಹಾಗೂ ಅಧಿಕಾರಿಗಳು ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಈ ತರಬೇತಿಯು ರಾಜ್ಯ ಸರ್ಕಾರದ ಎಸ್ಡಿಎ ಹಾಗೂ ಎಫ್ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹಕಾರಿಯಾಗಲಿದೆ.
ತರಬೇತಿಯಲ್ಲಿ ಪಾಲ್ಗೊಳ್ಳಲು ಆಸಕ್ತಿಯಿರುವ ಅಭ್ಯರ್ಥಿಗಳು ನವೆಂಬರ್ 9ರೊಳಗೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಅಥವಾ ಮೊಬೈಲ್ ಸಂಖ್ಯೆ 9964760090 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಿಡ್ಕರ್: ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ: ಡಾ. ಬಾಬು ಜನಜೀವನ ರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಜಾತಿ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಡೋರ, ಸಮಗಾರ ಮೋಚಿ ಜನಾಂಗದವರಿಗೆ 2025-26ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಸ್ವಾವಲಂಬಿ/ ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮಶಿಲ್ಪಿ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ವಸತಿ ಯೋಜನೆ ಹಾಗೂ ಕೌಶಲ ಅಭಿವೃದ್ಧಿ ಮತ್ತು ಆದಾಯ ಗಳಿಕೆ ತರಬೇತಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಲಿಂಕ್ ಮೂಲಕ ನ.28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.:9380501076 ನ್ನು ಸಂಪರ್ಕಿಸುವಂತೆ ಲಿಡ್ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆ.ಐ.ಸಿ.ಎಂ ನಲ್ಲಿ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಶಿವಮೊಗ್ಗದ 2ನೇ ಹಂತದ ವಿನೋಬನಗರದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆ.ಐ.ಸಿ.ಎಮ್) ಸಂಸ್ಥೆಯ ವತಿಯಿಂದ 6 ತಿಂಗಳ ಅವಧಿಯ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಯು ನವೆಂಬರ್ 14 ರಿಂದ ಪ್ರಾರಂಭವಾಗಲಿದೆ.
ಈ ಕೋರ್ಸ್ಗೆ ಬಿ.ಕಾಂ, ಬಿ.ಬಿ.ಎಂ ಅಥವಾ ಲೆಕ್ಕಶಾಸ್ತ್ರವನ್ನು ಐಚ್ಛಿಕ ವಿಷಯವನ್ನಾಗಿ ಒಳಗೊಂಡ ಇತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಸಾಮಾನ್ಯ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕ ರೂ.9,500/- ಇದ್ದು, ಬಿಪಿಎಲ್ ಹಾಗೂ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರಲಿದೆ.
ಈ ತರಬೇತಿಯಲ್ಲಿ ಸಹಕಾರ ಕ್ಷೇತ್ರ ಮತ್ತು ಲೆಕ್ಕ ಪತ್ರ ನಿರ್ವಹಣೆಯ ಜ್ಞಾನ, ಲೆಕ್ಕ ಪರಿಶೋಧನೆ, ಟ್ಯಾಲಿ ಹಾಗೂ ಡಿಜಿಟಲ್ ಅಕೌಂಟಿಂಗ್ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ಇದು ಸಹಕಾರ ಸಂಘ/ಸಂಸ್ಥೆಗಳಲ್ಲಿ ಹಾಗೂ ಖಾಸಗಿ ರಂಗದಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗ ಕಂಡುಕೊಳ್ಳಲು ಸಹಕಾರಿಯಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 13 ಕೊನೆಯ ದಿನಾಂಕವಾಗಿದೆ. ಆನ್ಲೈನ್ ಮೂಲಕ https://dca.kscfl.in ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9449075746, 8310554752, 9845068191, ಅಥವಾ 7026246493 ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

