ಕೊಪ್ಪಳ: ರೈಲಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಲಿ ಎಂದು ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಯಲಬುರ್ಗಾ ತಾಲೂಕಿನ ಸಾಲಭಾವಿ ಗ್ರಾಮದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಬಿಜೆಪಿಯವರಿಗೆ ಜನಪರ ಕಾಳಜಿ ಇದ್ದಲ್ಲಿ ಕೇಂದ್ರ ಬಜೆಟ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ ದೇಶದಲ್ಲಿಯೇ ಮಾದರಿಯಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಬಿಜೆಪಿಯವರು ಕೂಡ ಇಂತಹ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

