HomeKarnatakaಬಿಪಿಎಲ್, ಆಧಾರ್ ಕಾರ್ಡ್ ಹೊಂದಿದ ನಿರುದ್ಯೋಗಿ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ಬಿಪಿಎಲ್, ಆಧಾರ್ ಕಾರ್ಡ್ ಹೊಂದಿದ ನಿರುದ್ಯೋಗಿ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ  ಸಹಯೋಗದಲ್ಲಿ  ನಡೆಸುತ್ತಿರುವ  ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ  ಕಂಪ್ಯೂಟರ್ ಡಿಟಿಪಿ  ಕುರಿತ 45 ದಿನಗಳ ಉಚಿತ ತರಬೇತಿಯು 2024ರ ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ- ಯುವತಿಯರು ಡಿಸೆಂಬರ್ 18 ರಂದು ನಡೆಯಲಿರುವ  ನೇರ ಸಂದರ್ಶನದಲ್ಲಿ  ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಹೊಂದಿರಬೇಕು.

ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9380162042, 9241482541, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಶಾಖೆ, ರುಡ್ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular