HomeKarnatakaನಿರುದ್ಯೋಗಿಗಳಿಗೆ ಅಣಬೆ ಬೇಸಾಯ ಕುರಿತು ಉಚಿತ ತರಬೇತಿ

ನಿರುದ್ಯೋಗಿಗಳಿಗೆ ಅಣಬೆ ಬೇಸಾಯ ಕುರಿತು ಉಚಿತ ತರಬೇತಿ

ಶಿವಮೊಗ್ಗ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ.11 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಅಣಬೆ ಬೇಸಾಯ ಕುರಿತು ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ. 05 ರಂದು ಬೆಳಿಗ್ಗೆ 10.00 ಕ್ಕೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಮೇ. 05 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050/ 9591514154/ 9686248369/6363139123/ 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular