HomeLatest News500 ಕೋಟಿ ಮಹಿಳೆಯರ ಉಚಿತ ಪ್ರಯಾಣ: ವಿಶ್ವದಾಖಲೆಗೆ ಪಾತ್ರವಾದ 'ಶಕ್ತಿ' ಯೋಜನೆ: ಸಿಎಂ ಹರ್ಷ

500 ಕೋಟಿ ಮಹಿಳೆಯರ ಉಚಿತ ಪ್ರಯಾಣ: ವಿಶ್ವದಾಖಲೆಗೆ ಪಾತ್ರವಾದ ‘ಶಕ್ತಿ’ ಯೋಜನೆ: ಸಿಎಂ ಹರ್ಷ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಶಕ್ತಿ ಯೋಜನೆಯಡಿ ಮಹಿಳೆಯರು 500 ಕೋಟಿ ಉಚಿತ ಟಿಕೇಟ್ ಪಡೆದು ಪ್ರಯಾಣ ಮಾಡಿದ್ದಾರೆ. ಇದು ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹರ್ಷ ವ್ಯಕ್ತಪಡಿಸಿದ್ದಾರೆ.

ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು.

ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ, ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 01 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿಯಾಗಲಿಲ್ಲ.

ಯೋಜನೆಯನ್ನು ಜಾರಿಗೆ ಕೊಟ್ಟ ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರಿಗೂ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು ಎಂದು ಸಿಎಂ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular