ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ 500 ಕೋಟಿಯ ವಿಶೇಷ ಟಿಕೆಟ್ ವಿತರಣೆ ಮಾಡಲಿದ್ದಾರೆ.
ಬಿಎಂಟಿಸಿ ವತಿಯಿಂದ ಕುಮಾರ ಪಾರ್ಕ್ ಈಸ್ಟ್ ವಿಂಡ್ಸರ್ ಸರ್ಕಲ್ ಬಳಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. 2023ರ ಜೂನ್ 11ರಂದು ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಪ್ರತಿದಿನ ಒಂದು ಕೋಟಿಗೂ ಹೆಚ್ಚಿನ ಪ್ರಯಾಣಿಕರು ಸರ್ಕಾರಿ ಬಸ್ ಗಳಲ್ಲಿ ಪ್ರಯಾಣಿಸುತ್ತಾರೆ. ಇವರಲ್ಲಿ 80 ಲಕ್ಷ ಮಹಿಳೆಯರೇ ಆಗಿದ್ದಾರೆ. ರಾಜ್ಯ ಸರ್ಕಾರದಿಂದ ಇದುವರೆಗೆ 12,500 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಸೋಮವಾರ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಿಹಿ ಹಂಚಿ ಸಂಭ್ರಮ ಆಚರಣೆಗೆ ನಿರ್ಧರಿಸಲಾಗಿದೆ.