HomeKarnatakaBIG NEWS: ಕೆಎಫ್‌ಡಿ ಬಾಧಿತರಿಗೆ ಉಚಿತ ಚಿಕಿತ್ಸೆ; APL ಕುಟುಂಬಕ್ಕೂ ವಿಸ್ತರಿಸಿದ ರಾಜ್ಯ ಸರ್ಕಾರ

BIG NEWS: ಕೆಎಫ್‌ಡಿ ಬಾಧಿತರಿಗೆ ಉಚಿತ ಚಿಕಿತ್ಸೆ; APL ಕುಟುಂಬಕ್ಕೂ ವಿಸ್ತರಿಸಿದ ರಾಜ್ಯ ಸರ್ಕಾರ

ಮಲೆನಾಡು ಭಾಗಗಳಲ್ಲಿ ಹೆಚ್ಚಾಗಿ ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸರ್ವ ಪ್ರಯತ್ನ ನಡೆಸುತ್ತಿದ್ದು, ಇದರ ಮಧ್ಯೆ ಮಹತ್ವದ ತೀರ್ಮಾ ನ ಕೈಗೊಳ್ಳಲಾಗಿದೆ.

ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದು, ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular