ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಮೊದಲ ಒಂದು ವಾರದವರೆಗೆ 1.5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಜಾರಿಗೊಳಿಸಿದೆ.
ಮಂಗಳವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಮೇ 5ರಿಂದಲೇ ಜಾರಿಗೆ ಬರುವಂತೆ ದೇಶಾದ್ಯಂತ ಸರ್ಕಾರಿ ಮತ್ತು ನಿಗದಿತ ಖಾಸಗಿ ಆಸ್ಪತ್ರೆಗಳಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ.
ದೇಶದ ಯಾವುದೇ ಭಾಗದಲ್ಲಿ ಅಪಘಾತದಲ್ಲಿ ಗಾಯಗೊಂಡವರು ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ಸರ್ಕಾರಿ ಮತ್ತು ಸರ್ಕಾರ ನಿಗದಿಪಡಿಸಿದ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಸಕಾಲಕ್ಕೆ ಚಿಕಿತ್ಸೆ ಸಿಗದೇ ದೇಶಾದ್ಯಂತ ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಚ್ಚುತ್ತಿರುವ ಸಾವಿನ ಪ್ರಮಾಣ ತಗ್ಗಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ.