HomeKarnatakaಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದರೆ 2.5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ: ಸಚಿವ ಯು.ಟಿ. ಖಾದರ್ ಮಾಹಿತಿ

ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದರೆ 2.5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ: ಸಚಿವ ಯು.ಟಿ. ಖಾದರ್ ಮಾಹಿತಿ

ಕಾರವಾರ: ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದರೆ 2.5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಕುಮಟಾದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ಸಂಸ್ಥೆಯ CSR ನಿಧಿಯಡಿ ನಿರ್ಮಿಸಲಾದ ಹೊಸ ಟ್ರಾಮಾ ಕೇರ್ ಸೆಂಟರ್ ಮತ್ತು ತುರ್ತು ಚಿಕಿತ್ಸಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ದೇಶ, ವಿದೇಶ ಹಾಗೂ ಯಾವುದೇ ರಾಜ್ಯದ ವ್ಯಕ್ತಿ ಕರ್ನಾಟಕದಲ್ಲಿ ರಸ್ತೆ ಅಪಘಾತಕ್ಕೊಳಗಾದರೆ, ಆಸ್ಪತ್ರೆಗೆ ದಾಖಲಾದ ಮೊದಲ 7 ದಿನಗಳವರೆಗೆ 2.5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸೇರಿಸಿದರೆ ಚಿಕಿತ್ಸಾ ವೆಚ್ಚ ಯಾರು ಪಾವತಿಸುವುದು ಎಂಬ ಸಾರ್ವಜನಿಕರ ಗೊಂದಲ ನಿವಾರಿಸಲು ಹಾಗೂ ತುರ್ತು ಜೀವ ರಕ್ಷಣೆಗೆ ಆದ್ಯತೆ ನೀಡಲು ಈ ಯೋಜನೆ ರೂಪಿಸಲಾಗುತ್ತಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ತುರ್ತು ಕರೆ ಬಂದ 15 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ನಿಯಮಿತ ಸಮಯದಲ್ಲಿ ಆಂಬ್ಯುಲೆನ್ಸ್ ಬರದಿದ್ದರೆ ನಿರ್ವಹಣಾ ಸಂಸ್ಥೆಗೆ 3,000 ರೂ.ನಿಂದ 5,000 ರೂ.ವರೆಗೆ ದಂಡ ವಿಧಿಸುವ ಕಾಯ್ದೆ ತರಲಾಗುವುದು ಎಂದು ತಿಳಿಸಿದ್ದಾರೆ.

ಶಾಲಾ ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಿದ್ದು, ಶಾಲಾ ಮಟ್ಟದಲ್ಲಿ ಮಕ್ಕಳಿಗೆ ಅನಾರೋಗ್ಯ ತರುವ ಜಂಕ್ ಫುಡ್ ಸಿಗದಂತೆ ತಡೆಯಲು ಕಠಿಣ ನಿಯಮ ರೂಪಿಸಲಾಗುವುದು. ಆಹಾರ ಕಲಬೆರಕೆ ತಡೆಯಲು ಹೈ-ಟೆಕ್ ಲ್ಯಾಬ್ ಗಳನ್ನು ಸ್ಥಾಪಿಸಲಾಗುವುದು. ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್‌ಗಳು, ಫಾರ್ಮಾಸಿಸ್ಟ್ ಹಾಗೂ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳನ್ನು ಒಪ್ಪಂದ ಹಾಗೂ ಖಾಯಂ ಆಧಾರದ ಮೇಲೆ ತಕ್ಷಣ ಭರ್ತಿ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular