HomeKarnatakaGOOD NEWS: ಜಿಬಿಎಸ್ ನರಮಂಡಲ ಕಾಯಿಲೆ ರೋಗಿಗಳಿಗೆ 2 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ

GOOD NEWS: ಜಿಬಿಎಸ್ ನರಮಂಡಲ ಕಾಯಿಲೆ ರೋಗಿಗಳಿಗೆ 2 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ

ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.

ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ ಆದ ‘ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಈಗ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (AB PMJAY-CM’s ArK) ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಈ ಕುರಿತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನೂತನ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದರಂತೆ,

ಉಚಿತ ಚಿಕಿತ್ಸೆ: ಈ ಮೊದಲು ಇದ್ದ ಮೂಲ ಚಿಕಿತ್ಸೆಯ ಜೊತೆಗೆ ಈಗ IVIG ಥೆರಪಿಯನ್ನೂ ‘ಹೆಚ್ಚುವರಿ ಪ್ಯಾಕೇಜ್’ ಆಗಿ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ರೋಗಿಗೆ ಗರಿಷ್ಠ ₹2 ಲಕ್ಷದವರೆಗೆ ಈ ಚಿಕಿತ್ಸಾ ಸೌಲಭ್ಯ ಉಚಿತವಾಗಿ ದೊರೆಯಲಿದೆ.

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular