ಬೆಂಗಳೂರು: ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ಚೈತನ್ಯನಗರದಲ್ಲಿ ಈ ಘಟನೆ ನಡೆದಿದೆ. ಮೀನಾಕ್ಷಿ (33) ಮೃತ ಮಹಿಳೆ. ಮನೆಯಲ್ಲಿ ಫ್ರಿಡ್ಜ್ ಕ್ಲೀನ್ ಮಾಡುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

