ಹಾಸನ: ಹಾಸನ ಜಿಲ್ಲೆ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಶೌಚಾಲಯ ಸಮೀಪ ಸೋಮವಾರ ಹಾಡಹಗಲೇ ಗೆಳೆಯನನ್ನೇ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಹುಡುಗಿಯ ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಿರೀಶ್ ಕೊಲೆಯಾದ ಯುವಕ. ಸೀನ ಕೊಲೆ ಆರೋಪಿ. ಸೀನ ಮತ್ತು ಗಿರೀಶ್ ಸ್ನೇಹಿತರಾಗಿದ್ದು, ಪ್ರೀತಿಸುತ್ತಿದ್ದ ಯುವತಿ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿ ವಿಕೋಪಕ್ಕೆ ತಿರುಗಿದೆ.
ಗಿರೀಶ್ ಬಸ್ ನಿಲ್ದಾಣದ ಶೌಚಾಲಯಕ್ಕೆ ಹೋಗಿ ವಾಪಸ್ ಬರುವಾಗ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸೀನ ಕೋಳಿ ಕತ್ತರಿಸುವ ಮಚ್ಚು ತಂದು ಗಿರೀಶ್ ತಲೆ, ಕುತ್ತಿಗೆ ಹಾಗೂ ದೇಹದ ಇತರ ಭಾಗಗಳಿಗೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬೇಲೂರು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
